ನವದೆಹಲಿ: ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ (Mysuru-Bengaluru Highway) ಅವೈಜ್ಞಾನಿಕವಾಗಿದ್ದು ಇದರಿಂದ ರೈತರು (Farmers) ಹಾಗೂ ಜನರಿಗೆ ಸಮಸ್ಯೆಗಳು ಎದುರಾಗುತ್ತಿದೆ ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ದೆಹಲಿಯಲ್ಲಿ ಕೇಂದ್ರ ರಸ್ತೆ ಹಾಗೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಗಮನಕ್ಕೆ ತಂದಿದ್ದಾರೆ.
ನಿನ್ನೆ ಸಂಸತ್‍ನಲ್ಲಿಯೇ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಕುರಿತು ಮಾತನಾಡಿದ್ದ ಸುಮಲತಾ ಅಂಬರೀಶ್, ಇಂದು ಖುದ್ದು ನಿತಿನ್ ಗಡ್ಕರಿಯರನ್ನು ಭೇಟಿ ಮಾಡಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ. ನೈಜ ತಾಂತ್ರಿಕ ಹಾಗೂ ವಿನ್ಯಾಸದ ಲೋಪದೋಷಗಳಾದ ಅವೈಜ್ಞಾನಿಕ ಚರಂಡಿ, ಸರ್ವಿಸ್ ರಸ್ತೆ ವಿನ್ಯಾಸ, ವಿವಿಧ ಭಾಗಗಳಲ್ಲಿ ಹೆದ್ದಾರಿಗೆ ಅಡ್ಡಲಾಗಿ ಕೆಳಸೇತುವೆಗಳ ನಿರ್ಮಾಣ ಹಾಗೂ ರೈತರು ಕೃಷಿ ಕಾರ್ಯಗಳಿಗೆ ಉಪಯೋಗಿಸುವ ನೀರು ಹರಿವಿಕೆಗೆ ಚರಂಡಿಗಳ ನಿರ್ಮಾಣದ ಬದಲಾಗಿ ಕಾಂಕ್ರೀಟ್ ಪೈಪ್‍ಗಳನ್ನು ಅವೈಜ್ಞಾನಿಕವಾಗಿ ಅಳವಡಿಕೆ ಮಾಡಲಾಗಿದೆ ಎಂದು ತಿಳಿ ಹೇಳಿದ್ದಾರೆ. ಇದನ್ನೂ ಓದಿ: ಎಸಿ ಇರುವ ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಸಲಹೆ : ಸುಧಾಕರ್
ಅಲ್ಲದೇ ಈಗಾಗಲೇ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗಳು ಬಿರುಕು ಬಿಟ್ಟಿರುವುದು ಸಹ ನಾನು ಪರಿವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಂಡುಬಂದಿದೆ. ಈ ಕಳಪೆ ಗುಣಮಟ್ಟದ ಕಾಮಗಾರಿಯನ್ನು ಆದಷ್ಟು ಬೇಗ ಸರಿಪಡಿಸಬೇಕು ಜೊತೆಗೆ ಈ ಬಾರಿಯ ಮಳೆಯಿಂದ ರೈತರಿಗೆ ಹಾಗೂ ಹೆದ್ದಾರಿ ಬಳಕೆದಾರರಿಗೆ ತೊಂದರೆ ಉಂಟಾಗಿದೆ. ಹೀಗಾಗಿ ಈ ಬಗ್ಗೆ ಗಮನವರಿಸಿ ತಿಳಿಸಿದ್ದಾರೆ. ಇದನ್ನೂ ಓದಿ: ನಟಿ ಜಯಪ್ರದ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ ರಾಂಪೂರ್ ಕೋರ್ಟ್
Live Tv
[brid partner=56869869 player=32851 video=960834 autoplay=true]