ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರನ್ನು ಶನಿವಾರ ಭೇಟಿಯಾದ ಬೆನ್ನಲ್ಲಿಯೇ ಇಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ದೆಹಲಿಗೆ ತೆರಳಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್‍ಗೆ (JDS) ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವುದು ಫಿಕ್ಸ್ ಆಗಿದೆ ಎನ್ನಲಾಗುತ್ತಿದೆ. ಹೀಗಾಗಿ ಮಂಡ್ಯದಲ್ಲಿ ಸ್ಪರ್ಧೆಗೆ ದಳಪತಿಗಳ ಸಿದ್ಧತೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.
ಕೂಡಲೇ ದೆಹಲಿಗೆ ಬರಬೇಕೆಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲಿಯೇ ಇಂದು ಮಧ್ಯಾಹ್ನವೇ ಸುಮಲತಾ ಅವರು ರಾಷ್ಟ್ರರಾಜಧಾನಿಗೆ ಹೋಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (AmitShah) ಹಾಗೂ ಜೆಪಿ ನಡ್ಡಾ (JP Nadda) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಒಂದು ವೇಳೆ ಮಂಡ್ಯ ಟಿಕೆಟ್ ಕೈ ತಪ್ಪಿದ್ರೆ ಸುಮಲತಾ ನಡೆಯೇನು..?, ಪಕ್ಷೇತರರಾಗಿ ಸ್ಪರ್ಧಿಸ್ತಾರಾ…? ಕಣದಿಂದ ಸರಿಯುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಒಟ್ಟಿನಲ್ಲಿ ಸುಮಲತಾ ಅವರ ಮುಂದಿನ ನಡೆ ತೀವ್ರ ಕುತೂಹಲ ಹುಟ್ಟಿಸಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಟಿಕೆಟ್ ಫೈಟ್- ಹೊರಗಿನವರಿಗೆ ಟಿಕೆಟ್ ಬೇಡವೆಂದ್ರು ವಿಶ್ವನಾಥ್