ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರ ಮದುವೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮಾ.5 ಮತ್ತು 6ರಂದು ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್ನಲ್ಲಿ ಮದುವೆ ನಡೆಯಲಿದೆ.
ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ (Sivasri Skandaprasad) ಜೊತೆ ತೇಜಸ್ವಿ ಸೂರ್ಯ ಮದುವೆ ನಿಗದಿಯಾಗಿದೆ. ಇಬ್ಬರು ಮಾರ್ಚ್ ಮೊದಲ ವಾರ ದಾಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
Advertisement
ಮಾ.5ರ ಬುಧವಾರ ಸಂಜೆ ವರಪೂಜೆ ಕಾರ್ಯಕ್ರಮ ನಡೆಯಲಿದೆ. ಮಾ.6ರ ಗುರುವಾರ ಬೆಳಗ್ಗೆ ಕಾಶಿಯಾತ್ರೆ, ಜೀರಿಗೆ ಬೆಲ್ಲ, ಮುಹೂರ್ತ ಹಾಗೂ ಲಾಜಾ ಹೋಮ ನಡೆಸಲಾಗುತ್ತದೆ. ಬಳಿಕ ಅದೇ ದಿನ ಬೆಳಗ್ಗೆ 9:30 ರಿಂದ 10:15ರ ನಡುವಿನ ತುಲಾ ಲಗ್ನದಲ್ಲಿ ವಧು ಶಿವಶ್ರೀ ಸ್ಕಂದಪ್ರಸಾದ್‌ರನ್ನ ತೇಜಸ್ವಿ ಸೂರ್ಯ ವರಿಸಲಿದ್ದಾರೆ. ಇದಾದ ಮೇಲೆ ಅಂದೇ ತೇಜಸ್ವಿ ಸೂರ್ಯರ ಗಿರಿನಗರ ನಿವಾಸದಲ್ಲಿ, ವಧುವನ್ನು ಮನೆ ತುಂಬಿಸಿಕೊಳ್ಳುವ ಕಾರ್ಯಕ್ರಮ ಇರಲಿದೆ.
Advertisement
Advertisement
ಮದುವೆ ನಡೆದು ಎರಡು ದಿನಗಳ ಬಳಿಕ ಅಂದರೆ ಮಾ.9 ರಂದು ಭಾನುವಾರ ಆರತಕ್ಷತೆ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. ಬೆಳಗ್ಗೆ 10:30 ರಿಂದ 1:30 ರವರೆಗೆ ರಿಸೆಪ್ಪನ್ ನಡೆಯಲಿದ್ದು, ಗಣ್ಯರು ಹಾಜರಾಗಲಿದ್ದಾರೆ.
Advertisement
ತೇಜಸ್ವಿ ಸೂರ್ಯ ಅವರ ಭಾವಿ ಪತ್ನಿ ಶಿವಶ್ರೀ ಅವರು ಚೆನ್ನೈ (Chennai) ಮೂಲದ ಹೆಸರಾಂತ ಗಾಯಕಿ, ಭರತನಾಟ್ಯ ಪ್ರವೀಣೆ ಹಾಗೂ ಬಿಟೆಕ್ ಪದವೀಧರೆಯಾಗಿದ್ದಾರೆ. ಅಯೋಧ್ಯೆ ರಾಮಮಂದಿರ (Rammandira) ಲೋಕಾರ್ಪಣೆ ಸಂದರ್ಭದಲ್ಲಿ ಪೂಜಿಸಲೆಂದೇ ಹೂಗಳ ತಂದೆ ಹಾಡುವ ಮೂಲಕ ಪ್ರಧಾನಿ ಮೋದಿಯವರ (PM Narendra Modi) ಮೆಚ್ಚುಗೆಗೆ ಶಿವಶ್ರೀ ಪಾತ್ರರಾಗಿದ್ದರು.
ತೇಜಸ್ವಿ ಅವರಂತೆ ಶಿವಶ್ರೀ ಅವರು ಹರಿಕಥೆ, ಸೈಕ್ಲಿಂಗ್, ವಾಕಥಾನ್‌ನಲ್ಲಿ ಆಸಕ್ತಿ ಹೊಂದಿದ್ದಾರೆ ತೇಜಸ್ವಿ ಮತ್ತು ಶಿವಶ್ರೀ ಕೆಲ ವರ್ಷಗಳಿಂದ ಪರಿಚಯ ಹೊಂದಿದ್ದಾರೆ. ಈ ಹಿಂದೆ 2021ರಲ್ಲಿ ಚೆನ್ನೈನಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮವೊಂದರಲ್ಲಿ ತೇಜಸ್ವಿ ಸೂರ್ಯ ಭಾಗಿಯಾಗಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಶಿವಶ್ರೀಯವರನ್ನು ಸನ್ಮಾನಿಸಿದ್ದರು. ಈ ಫೋಟೋಗಳನ್ನ ಶಿವಶ್ರೀ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ತೇಜಸ್ವಿ ಸೂರ್ಯ ಕುಟುಂಬ ಮದುವೆಯನ್ನು ತಮ್ಮ ಸ್ವಂತ ಊರು ಚಿಕ್ಕಮಗಳೂರು ಜಿಲ್ಲೆಯ ಕಡೂರು ಸಮೀಪದ ಗ್ರಾಮದಲ್ಲಿ ನಡೆಸಬೇಕು ಎಂದು ಯೋಜಿಸಿದ್ದರು. ಆದರೆ ಕೆಲ ಸಂಬಂಧಿಕರ ಸಲಹೆ ಮೇರೆಗೆ ಬೆಂಗಳೂರಿನ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ಮದುವೆ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಎರಡು ಕುಟುಂಬಗಳು ಒಪ್ಪಿಗೆ ಸೂಚಿಸಿವೆ.