ನವದೆಹಲಿ: ಕಾಶ್ಮೀರದ (Kashmir) ರಜೌರಿಯಲ್ಲಿ ಭಯೋತ್ಪಾದಕರ (Terrorists) ವಿರುದ್ಧ ಕಾರ್ಯಚರಣೆಯಲ್ಲಿ ಹುತಾತ್ಮರಾದ ಬೆಂಗಳೂರು (Bengaluru) ಮೂಲದ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಅವರ ಕುಟುಂಬಕ್ಕೆ ಇನ್ನೂ ಪರಿಹಾರ (Compensation) ಹಣ ನೀಡಿಲ್ಲ. ಸಿಎಂ ಕೂಡಲೇ ಈ ಬಗ್ಗೆ ಗಮನ ಹರಿಸಿ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಆಗ್ರಹಿಸಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ (New Delhi) ಮಾತನಾಡಿದ ಅವರು, ಕಳೆದ 2 ವಾರದ ಹಿಂದೆ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದರು. ಅವರ ಪಾರ್ಥಿವ ಶರೀರ ಬೆಂಗಳೂರಿಗೆ ತರುವಾಗ ರಾಜ್ಯಪಾಲರು, ಸಿಎಂ ಸೇರಿ ಎಲ್ಲರೂ ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ತೆರಳಿದ್ದೆವು. ಅಂದು ಮುಖ್ಯಮಂತ್ರಿಗಳಿಗೆ ನಾನು ಮತ್ತು ವಿಜಯೇಂದ್ರ ಅವರು 50 ಲಕ್ಷ ರೂ. ಪರಿಹಾರ ನೀಡಲು ಮನವಿ ಮಾಡಿದ್ದೆವು. ಅದರಂತೆ ಸಿಎಂ ಪರಿಹಾರ ಘೋಷಣೆ ಮಾಡಿದ್ದರು ಎಂದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು – ಜೋತಿರಾದಿತ್ಯ ಸಿಂಧಿಯಾ ಬಣಕ್ಕೆ ಖುಷಿ ಕೊಡದ ಫಲಿತಾಂಶ
Advertisement
Advertisement
ಯಾರೇ ಸೈನಿಕರು ಹುತಾತ್ಮರಾದರೂ 50 ಲಕ್ಷ ರೂ. ಪರಿಹಾರ ಕೊಡಬಹುದು ಎಂದು ನಿಯಮ ಇದೆ. ಮುಖ್ಯಮಂತ್ರಿಗಳು ಸಹ ಅವತ್ತು ಪರಿಹಾರ ಘೋಷಣೆ ಮಾಡಿದ್ದರು. ಎರಡು ದಿನದ ಹಿಂದೆ ನಾನು ಪ್ರಾಂಜಲ್ ತಂದೆಗೆ ಫೋನ್ ಮಾಡಿ ಪರಿಹಾರದ ಮಾಹಿತಿ ಪಡೆದೆ. ಅವರ ತಂದೆ ಇವತ್ತಿನವರೆಗೂ ಸಹ ನನಗೆ ಯಾವುದೇ ಫೋನ್ ಬಂದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಾವು ಏಣಿಯಾಟ – ಅತಿದೊಡ್ಡ, ಅತಿಸಣ್ಣ ನಿರ್ಣಾಯಕ ಗೆಲುವುಗಳಿವು
Advertisement
ಪರಿಹಾರ ಹಣ ಬಿಡುಗಡೆಗೆ ನಾನು ಸಿಎಂ, ಡಿಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಸಿಎಂಗೆ ಮಾಧ್ಯಮದವರು ಈ ಬಗ್ಗೆ ಪ್ರಶ್ನೆ ಕೇಳಿದರೆ ಪ್ರಾಂಜಲ್ ಅಂದರೆ ಯಾರು? ನಾವೆಲ್ಲಿ ಪರಿಹಾರ ಕೊಡುತ್ತೇವೆ ಎಂದು ಹೇಳಿದ್ದೆವು ಎಂದು ಬೇಜವಾಬ್ದಾರಿಯುತವಾಗಿ ಮಾತನಾಡಿದ್ದಾರೆ. ಓರ್ವ ಯೋಧನ ಬಗ್ಗೆ ಮುಖ್ಯಮಂತ್ರಿಗಳು ಹೀಗೆ ಮಾತನಾಡಿದ್ದು ನೋಡಿ ಬಹಳ ಬೇಸರ ಆಯಿತು ಎಂದರು. ಇದನ್ನೂ ಓದಿ: ಬಿಜೆಪಿಗೆ ಭರ್ಜರಿ ಜಯ, ಹೂಡಿಕೆದಾರರ ಸಂಪತ್ತು ಒಂದೇ ದಿನ 6 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್
Advertisement
ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ಬಂದಾಗ ಮುಖ್ಯಮಂತ್ರಿಗಳ ಕಣ್ಣಲ್ಲೂ ಸಹ ನೀರಿತ್ತು. ಅವರು ಸಹ ಭಾವುಕರಾಗಿದ್ದರು. ಆದರೆ ಈಗಾಗಲೇ 15 ದಿನ ಆಯಿತು. ಇನ್ನೂ ಪರಿಹಾರ ಬಂದಿಲ್ಲ. ಆದಷ್ಟು ಬೇಗ ಪರಿಹಾರ ಹಣ ಬಿಡುಗಡೆ ಮಾಡಬೇಕಾಗಿರುವುದು ಸಿಎಂ ಜವಾಬ್ದಾರಿ. ಮುಖ್ಯಮಂತ್ರಿಗಳು ಎಲ್ಲರ ಬಳಿ ಕ್ಷಮೆ ಕೇಳಬೇಕು ಹಾಗೂ ಈ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: Mizoram Election Results: ʻಕೈʼ ಹಿಡಿಯದ ಮಿಜೋರಾಂ – ZPMಗೆ ಗೆಲುವು, 2 ಕ್ಷೇತ್ರಗಳಲ್ಲಿ ಅರಳಿದ ಕಮಲ