ಬೆಂಗಳೂರು/ಬಳ್ಳಾರಿ: ಬಳ್ಳಾರಿ ಚುನಾವಣೆಗೆ (Bellary Election) 21 ಕೋಟಿ ಹಣವನ್ನು ಬಳಸಿದ ಆರೋಪದಲ್ಲಿ ಸಂಸದ ತುಕಾರಾಂ (Tukaram) ಅವರನ್ನು ಇಡಿ ವಶಕ್ಕೆ ಪಡೆದಿದೆ.
ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆದಿದೆ. ಬಳ್ಳಾರಿ ಚುನಾವಣೆಗೆ ಪ್ರತಿ ಮತದಾರರಿಗೆ 200 ರೂ. ಹಂಚಿಕೆ ಆರೋಪದಲ್ಲಿ ಸಂಸದ ತುಕಾರಾಂ ಮನೆ ಮೇಲೆ ದಾಳಿ ನಡೆದಿದೆ. ಮತದಾರರಿಗೆ 200 ರೂ.ನಂತೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಭಾರೀ ಮಳೆ – 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಶಾಸಕರಾದ ನಾರಾ ಭರತ್ ರೆಡ್ಡಿ, ಗಣೇಶ್ (ಕಂಪ್ಲಿ ಕ್ಷೇತ್ರ), ಶ್ರೀನಿವಾಸ್ ಅವರ ಮನೆ ಮೇಲೂ ಇ.ಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಇದನ್ನೂ ಓದಿ: ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ
ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಶೋಧ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ರಾಜಾ ರಘುವಂಶಿ ಕೊಲೆ ಪ್ರಕರಣ – ಹಂತಕಿ ಸೇರಿ ಐವರನ್ನು ಮೇಘಾಲಯಕ್ಕೆ ಕರೆತಂದ ಪೊಲೀಸರು