ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (H.D.Deve Gowda) ಪತ್ನಿ ಚೆನ್ನಮ್ಮ ಅವರ ಸಮಾಧಿ ಸ್ಥಳಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಭೇಟಿ ನೀಡಿ ನಮನ ಸಲ್ಲಿಸಿದರು.
ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನಲ್ಲಿರುವ ಚೆನ್ನಮ್ಮ ಅವರ ಸಮಾಧಿಗೆ ಹೂವಿನ ಹಾರ ಹಾಕಿ, ಪುಷ್ಪಾರ್ಚನೆ ಮಾಡಿ ಸಂಸದ ಯದುವೀರ್ ನಮನ ಸಲ್ಲಿಸಿದರು. ಇದನ್ನೂ ಓದಿ: ನನ್ನ ಪತ್ನಿ ಅನ್ನಪೂರ್ಣೆ, ಆಕೆಯನ್ನು ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ – ಮಡದಿ ನೆನೆದು ಕಣ್ಣೀರಿಟ್ಟ ದೊಡ್ಡಗೌಡ್ರು
ಈ ವೇಳೆ ಸಮಾಧಿ ಸ್ಥಳದಲ್ಲೇ ಕುಳಿತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಹೆಚ್.ಡಿ.ರೇವಣ್ಣ ಅವರಿಗೆ ಸಾಂತ್ವನ ಹೇಳಿ ಒಡೆಯರ್ ಆರೋಗ್ಯ ವಿಚಾರಿಸಿದರು.
ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಚಿಕಿತ್ಸೆ ಫಲಿಸದೇ ಶನಿವಾರ (ಜು.19) ಆಸ್ಪತ್ರೆಯಲ್ಲಿ ನಿಧನರಾದರು. ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ದೇವೇಗೌಡರ ಹುಟ್ಟೂರಿನಲ್ಲಿ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಿತು. ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ – ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
