ಶ್ರೀನಗರ: ಕಾಶ್ಮೀರಿ ಪಂಡಿತರ ಹತ್ಯೆಯ ಬಗ್ಗೆ ಮಾತನಾಡುವುದಕ್ಕಿಂತ ಪ್ರಧಾನ ಮಂತ್ರಿಗೆ ಸಿನಿಮಾದ ಬಗ್ಗೆ ಮಾತನಾಡುವುದು ಮುಖ್ಯವಾಗಿದೆ ಎಂದು ಪ್ರಧಾನಿ ನರೆಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
Advertisement
ಗುರುವಾರ ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಕೇಂದ್ರ ಕಾಶ್ಮೀರದ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿತ್ತು . ತಹಸಿಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ರಾಹುಲ್ ಭಟ್ ಟಾರ್ಗೆಟ್ ಮಾಡಿದ್ದ ಉಗ್ರರು, ನೇರವಾಗಿ ಕಚೇರಿಗ ನುಗ್ಗಿ ರಾಹುಲ್ ಭಟ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕಚೇರಿಯಲ್ಲಿದ್ದ ಸಿಬ್ಬಂದಿ, ನಾಗರೀಕರು ಭಯಭೀತರಾಗಿ ಹೊರಗೆ ಬಂದಿದ್ದರು. ನಂತರ ಸ್ಥಳದಿಂದ ಉಗ್ರರು ತಪ್ಪಿಸಿಕೊಂಡಿದ್ದರು. ಇದನ್ನೂ ಓದಿ: ಹ್ಯಾರೀಸ್ ಅಂಧ ದರ್ಬಾರ್- ಗ್ರಂಥಾಲಯದ ಜಾಗದಲ್ಲಿ ಶಾಸಕರ ಕಚೇರಿ!
Advertisement
Advertisement
ರಾಹುಲ್‍ಗಾಂಧಿ ಅವರು, ಹತ್ಯೆಗೀಡಾದ ಸರ್ಕಾರಿ ಉದ್ಯೋಗಿಯ ಪತ್ನಿ ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ವೀಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದು, ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಜೊತೆಗೆ ಈ ಕುರಿತಂತೆ ಭದ್ರತೆಯ ಜವಾಬ್ದಾರಿಯನ್ನು ವಹಿಸಿ ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸುವಂತೆ ಪ್ರಧಾನಿಯನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪಂಡಿತನ ಮೇಲಿನ ದಾಳಿಯಲ್ಲ, ಅದು ಕಾಶ್ಮೀರದ ಆತ್ಮದ ಮೇಲಿನ ದಾಳಿ: ಫಾರೂಕ್ ಅಬ್ದುಲ್ಲಾ
Advertisement
ಕಾಶ್ಮೀರಿ ಪಂಡಿತರ ನರಮೇಧಕ್ಕಿಂತ ಪ್ರಧಾನಮಂತ್ರಿಯವರಿಗೆ ಚಿತ್ರದ ಬಗ್ಗೆ ಮಾತನಾಡುವುದು ಮುಖ್ಯವಾಗಿದೆ ಎಂದು ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವನ್ನು ಉಲ್ಲೇಖಿಸಿದ್ದಾರೆ. ಬಿಜೆಪಿಯ ನೀತಿಗಳಿಂದಾಗಿ ಇಂದು ಕಾಶ್ಮೀರದಲ್ಲಿ ಭಯೋತ್ಪಾದನೆ ಉತ್ತುಂಗದಲ್ಲಿದೆ. ಮೊದಲು ಭದ್ರತೆಯ ಜವಾಬ್ದಾರಿಯನ್ನು ತೆಗೆದುಕೊಂಡು ಶಾಂತಿ ಸ್ಥಾಪಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದ್ದಾರೆ.