ಕನ್ನಡದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ನ್ಯಾಷನಲ್ ಕ್ರಶ್ ಎಂದು ಹೆಮ್ಮೆಯಿಂದ ಅಭಿಮಾನಿಗಳು ಕರೆಯುತ್ತಿದ್ದರು. ಸಾಲು ಸಾಲು ಚಿತ್ರಗಳು ಹಿಟ್ ಆದ ಹಿನ್ನೆಲೆಯಲ್ಲಿ 2020ರಲ್ಲಿ ಗೂಗಲ್ ನ್ಯಾಷನಲ್ ಕ್ರಶ್ (National Crush) ಟ್ರೆಂಡಿಂಗ್ ಪಟ್ಟವನ್ನು ರಶ್ಮಿಕಾಗೆ ನೀಡಿತ್ತು. ಇದೀಗ ಆ ಪಟ್ಟವನ್ನು ಮತ್ತೋರ್ವ ನಟಿ ಕಸಿದುಕೊಂಡಿದ್ದಾರೆ.
Advertisement
ಈ ಬಾರಿಯ ಕಾನ್ ಚಿತ್ರೋತ್ಸವದಲ್ಲಿ ಮೃಣಾಲ್ (Mrunal Thakur) ಭಾಗಿಯಾಗಿದ್ದಾರೆ. ಕಾನ್ ಫೆಸ್ಟಿವೆಲ್ ನಲ್ಲಿ ಭಾಗಿಯಾದ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು ವೈರಲ್ ಆಗಿದ್ದು, ನೆಟ್ಟಿಗರು ಮೃಣಾಲ್ ಗೆ ನ್ಯಾಷನಲ್ ಕ್ರಶ್ ಎಂದು ಕರೆದಿದ್ದಾರೆ. ಅದು ಟ್ರೆಂಡ್ ಕೂಡ ಆಗಿದೆ. ಹೀಗಾಗಿ ರಶ್ಮಿಕಾ ಹೆಸರಿನಲ್ಲಿದ್ದ ಆ ಹೊಗಳಿಕೆ ಇದೀಗ ಮೃಣಾಲ್ ಗೆ ಸಿಕ್ಕಿದೆ.
Advertisement
Advertisement
ಟಾಲಿವುಡ್ ನ ಸೀತಾ ರಾಮಂ ಸಿನಿಮಾದ ಮೂಲಕ ಗಮನ ಸೆಳೆದವರು ಮೃಣಾಲ್. ಇದು ಇವರ ಮೊದಲ ಚಿತ್ರವಾದರೂ, ಸಾಕಷ್ಟು ಹೆಸರು ತಂದುಕೊಟ್ಟಿತು. ಈ ಸಿನಿಮಾದಲ್ಲಿನ ನಟನೆಗೆ ಬಹುತೇಕರು ಫಿದಾ ಆಗಿದ್ದರು. ಆ ಸಿನಿಮಾನೇ ಇಂದು ಕಾನ್ ಚಿತ್ರೋತ್ಸವಕ್ಕೆ ಹೋಗುವಂತೆ ಮಾಡಿದೆ. ಅಲ್ಲದೇ, ಮೃಣಾಲ್ ಧರಿಸಿದ್ದ ಕಾಸ್ಟ್ಯೂಮ್ ಕೂಡ ಟ್ರೆಂಡ್ ಆಗಿದೆ. ಟಾಲಿವುಡ್ (Tollywood) ನಲ್ಲೇ ರಶ್ಮಿಕಾ ಮತ್ತು ಮೃಣಾಲ್ ಗೆ ಪೈಪೋಟಿ ಏರ್ಪಟ್ಟಿದೆ.
Advertisement
ರಶ್ಮಿಕಾ ಮಂದಣ್ಣ ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟವರು. ಆನಂತರ ತಮಿಳು, ತೆಲುಗಿನಲ್ಲೂ ಹಲವು ಚಿತ್ರಗಳನ್ನು ಮಾಡಿದರು. ಕೇವಲ ದಕ್ಷಿಣದ ಸಿನಿಮಾಗಳಲ್ಲಿ ಮಾತ್ರವಲ್ಲ, ಹಿಂದಿಯಲ್ಲೂ ಇದೀಗ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಬಾಲಿವುಡ್ ನಲ್ಲೂ ಅವರು ಬ್ಯುಸಿಯಾಗಿದ್ದಾರೆ.