ರಾಂಚಿ: ಕ್ರಿಕೆಟ್ ಜಗತ್ತಿನಲ್ಲಿ ಒಂದಿಲ್ಲೊಂದು ಸಾಧನೆ ಮಾಡುತ್ತಾ ಮುಂದುವರಿದಿರುವ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
ಹೌದು, ಮಹೇಂದ್ರ ಸಿಂಗ್ ಧೋನಿಯವರು ಮತ್ತೊಂದು ದಾಖಲೆಯನ್ನು ನಿರ್ಮಿಸಿದ್ದಾರೆ. ಆದರೆ ಅದು ಕ್ರಿಕೆಟ್ ನಲ್ಲಿ ಅಲ್ಲ. ಧೋನಿಯವರು 2017-18ರ ಆದಾಯ ತೆರಿಗೆ ಮೌಲ್ಯಮಾಪನ ವರ್ಷದಲ್ಲಿ ಅತೀ ಹೆಚ್ಚು ತೆರಿಗೆ ಪಾವತಿಸಿದ್ದಾರೆ. ಈ ಮೂಲಕ ಜಾರ್ಖಂಡ್ ರಾಜ್ಯದಲ್ಲಿಯೇ ವೈಯಕ್ತಿಕವಾಗಿ ಅತೀ ಹೆಚ್ಚು ತೆರಿಗೆ ಪಾವತಿ ಮಾಡಿದ ತೆರಿಗೆದಾರ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
Advertisement
Advertisement
ಪ್ರಸಕ್ತ ವರ್ಷ ಧೋನಿಯವರು ಬರೋಬ್ಬರಿ 12.17 ಕೋಟಿ ರೂಪಾಯಿಯನ್ನು ತೆರಿಗೆ ಪಾವತಿ ಮಾಡಿದ್ದಾರೆ. ಕ್ರಿಕೆಟ್ ಹಾಗೂ ಜಾಹೀರಾತುಗಳಿಂದ ಸಾಕಷ್ಟು ಆದಾಯ ಹೊಂದಿರುವ ಅವರು ಅತೀ ಹೆಚ್ಚು ತೆರಿಗೆ ಪಾವತಿಸುವ ಮೂಲಕ ದೇಶಾದ್ಯಂತ ಭಾರೀ ಸುದ್ದಿಯಲ್ಲಿದ್ದಾರೆ. ಇದನ್ನೂ ಓದಿ: ಧೋನಿಯ ಒಂದು ದಿನದ ಜಾಹೀರಾತು ಸಂಭಾವನೆ ಎಷ್ಟು?
Advertisement
ಧೋನಿಯವರು 2016-17ರ ಸಾಲಿನಲ್ಲಿ 10.93 ಕೋಟಿ ರೂಪಾಯಿಯನ್ನು ಪಾವತಿಸಿದ್ದರು. ಆದರೆ ಈ ಬಾರಿ 12.17 ಕೋಟಿ ರೂಪಾಯಿ ಪಾವತಿಸುವ ಮೂಲಕ ಕಳೆದ ಬಾರಿಗಿಂತ 1.24 ಕೋಟಿ ರೂಪಾಯಿ ತೆರಿಗೆ ಪಾವತಿ ಮಾಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಧೋನಿ ಆದಾಯ ಎಷ್ಟಿದೆ?