ಐಪಿಎಲ್ 2026ರ (IPL 2026) ಮೊದಲೆರಡು ವಾರಗಳಲ್ಲಿ ಎಂ.ಎಸ್ ಧೋನಿ (MS Dhoni) ಆಡೋದು ಡೌಟ್ ಎಂದು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ಮಾಹಿತಿ ಪ್ರಕಾರ, ಧೋನಿ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಸದ್ಯ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಐಪಿಎಲ್ 2026ರ ಮೊದಲ ಎರಡು ವಾರಗಳಲ್ಲಿ ಎಂ.ಎಸ್ ಧೋನಿ ಆಡೋದು ಡೌಟ್ ಎಂದು ತಿಳಿಸಿದೆ.
Official Statement
MS Dhoni is currently undergoing rehabilitation for a calf strain. As a result, he is likely to miss the first two weeks of TATA IPL 2026.
Get well soon, Thala! 💛🦁 pic.twitter.com/4dgmt5EWFi
— Chennai Super Kings (@ChennaiIPL) March 28, 2026
ಇಂದಿನಿಂದ ಐಪಿಎಲ್ ಆರಂಭವಾಗುತ್ತಿದೆ. ಮಾ.30ರಂದು ರಾಜಸ್ಥಾನ ರಾಯಲ್ಸ್ ಜೊತೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯ ಆಡಲಿದೆ. ಬಳಿಕ ಏ.3ರಂದು ತವರು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಜೊತೆ ಆಡಲಿದೆ.
ಸಿಎಸ್ಕೆ ಪ್ರ್ಯಾಕ್ಟೀಸ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಧೋನಿ ಬ್ಯಾಟಿಂಗ್ ಮಾಡುತ್ತಿದ್ದು, ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದರು. ಹೀಗಾಗಿ ಮೊದಲ ಎರಡು ವಾರಗಳಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ ಎನ್ನಲಾಗಿದೆ.

