ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಟ್ಟರೆ ಭಾರತದ ಮಾಜಿ ನಾಯಕ ಎಂ.ಎಸ್ ಧೋನಿ ಅವರು ಭಾರತದಲ್ಲಿ ಅತೀ ಹೆಚ್ಚು ಜನ ಮೆಚ್ಚುಗೆ ಪಡೆದ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ.
ಯೂಗೋವ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ, ಭಾರತದಲ್ಲಿ ಪ್ರಧಾನಿ ಮೋದಿ ಅವರನ್ನು ಬಿಟ್ಟರೆ ಎಂ. ಎಸ್ ಧೋನಿ ಅವರು ಅತೀ ಹೆಚ್ಚು ಜನರ ಮೆಚ್ಚುಗೆ ಪಡೆದಿದ್ದಾರೆ ಎಂದು ಹೇಳಿದೆ. ಇವರನ್ನು ಬಿಟ್ಟರೆ ಮೂರನೇ ಸ್ಥಾನದಲ್ಲಿ ಉದ್ಯಮಿ ರತನ್ ಟಾಟಾ, ನಾಲ್ಕನೇ ಸ್ಥಾನದಲ್ಲಿ ಬರಾಕ್ ಒಬಾಮ ಇದ್ದು, ಐದನೇ ಸ್ಥಾನದಲ್ಲಿ ಬಿಲ್ ಗೇಟ್ಸ್ ಇದ್ದಾರೆ.
Advertisement
Advertisement
ಇದರ ಜೊತೆಗೆ ಭಾರತದ ಅತ್ಯಂತ ಜನಪ್ರಿಯತೆ ಪಡೆದ ಕ್ರೀಡಾಪಟುಗಳ ಪಟ್ಟಿಯಲ್ಲಿ ಎಂ.ಎಸ್ ಧೋನಿ ಮೊದಲ ಸ್ಥಾನದಲ್ಲಿ ಇದ್ದಾರೆ. ಈ ಸಮೀಕ್ಷೆ ಮೂಲಕ 2019 ರ ವಿಶ್ವಕಪ್ ಬಳಿಕ ಯಾವ ಪಂದ್ಯವನ್ನು ಆಡದೇ ಇದ್ದರೂ ಧೋನಿ ಅವರ ಜನಪ್ರಿಯತೆ ಕಡಿಮೆ ಆಗಿಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಈ ಪಟ್ಟಿಯಲ್ಲಿ ಇವರನ್ನು ಬಿಟ್ಟರೆ ಎರಡನೇ ಸ್ಥಾನದಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಮೂರನೇ ಸ್ಥಾನದಲ್ಲಿ ನಾಯಕ ವಿರಾಟ್ ಕೊಹ್ಲಿ ಇದ್ದಾರೆ.
Advertisement
ಯೂಗೋವ್ ಸಮೀಕ್ಷೆಯ ಪ್ರಕಾರ ವಿಶ್ವದಾದ್ಯಂತ ಜನ ಮೆಚ್ಚುಗೆ ಪಡೆದ ಪುರುಷರ ಪಟ್ಟಿಯಲ್ಲಿ ಬಿಲ್ ಗೇಟ್ಸ್ ಮೊದಲ ಸ್ಥಾನದಲ್ಲಿ ಇದ್ದರೆ, ಮಹಿಳಾ ವಿಭಾಗದಲ್ಲಿ ಮಿಚೆಲ್ ಒಬಾಮ ಮೊದಲ ಸ್ಥಾನದಲ್ಲಿ ಇದ್ದಾರೆ. ಭಾರತದಲ್ಲಿ ಪುರುಷರ ವಿಭಾಗದಲ್ಲಿ ಮೋದಿ ಮೊದಲ ಸ್ಥಾನದಲ್ಲಿ ಇದ್ದರೆ, ಮಹಿಳಾ ವಿಭಾಗದಲ್ಲಿ ಆರು ಬಾರಿ ಬಾಕ್ಸಿಂಗ್ ವಿಶ್ವ ಚಾಂಪಿಯನ್‍ಶಿಪ್ ಗೆದ್ದ ಮೇರಿ ಕೋಮ್ ಅಗ್ರಸ್ಥಾನದಲ್ಲಿ ಇದ್ದಾರೆ.
Advertisement
ಯುಗೋವ್ ಬಿಡುಗಡೆ ಮಾಡಿರುವ ಈ ಪಟ್ಟಿಯಲ್ಲಿ ಬಾಲಿವುಡ್ ಸ್ಟಾರ್ಸ್ ಗಳು ಕಾಣಿಸಿಕೊಂಡಿದ್ದು, ಅಮಿತಾಬ್ ಬಚ್ಚನ್, ಶಾರೂಕ್ ಖಾನ್ ಮತ್ತು ಸಲ್ಮಾನ್ ಖಾನ್ ವಿಶ್ವದ ಅತೀ ಹೆಚ್ಚು ಮೆಚ್ಚುಗೆ ಪಡೆದ ಪಟ್ಟಿಯಲ್ಲಿ ಟಾಪ್ 20 ರಲ್ಲಿ ಕಾಣಿಸಿಕೊಂಡಿದ್ದಾರೆ.