Connect with us

Cricket

ಕಾಶ್ಮೀರ ಪರ್ವತದಲ್ಲಿ ಗಸ್ತು ತಿರುಗಲಿದ್ದಾರೆ ಧೋನಿ

Published

on

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವೆಸ್ಟ್ ಇಂಡೀಸ್ ಪ್ರವಾಸದಿಂದ ದೂರ ಉಳಿದಿದ್ದು, ಜುಲೈ 31 ರಂದು 106 ಸೇನೆಯ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

ಧೋನಿ ಜುಲೈ 31ರಿಂದ ಆಗಸ್ಟ್ 15ರವರೆಗೆ ಆರ್ಮಿ ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸಲಿದ್ದು ಈ ವೇಳೆ ಕಾಶ್ಮೀರ ಪರ್ವತದಲ್ಲಿ ಗಸ್ತು ತಿರುಗಲಿದ್ದಾರೆ. ಈ ಆರ್ಮಿ ಬಟಾಲಿಯನ್ ಯೂನಿಟ್ ಕಾಶ್ಮೀರದಲ್ಲಿದ್ದು, ವಿಕ್ಟರ್ ಫೋರ್ಸ್ ಒಂದು ಭಾಗವಾಗಿದೆ. ಗಸ್ತು ತಿರುಗಲಿರುವ ಧೋನಿ ಸೇನೆಯ ಜೊತೆ ತಂಗಲಿದ್ದಾರೆ.

ಧೋನಿ ಅವರಿಗೆ 2011ರಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ ನೀಡಲಾಗಿತ್ತು. ಈ ಕರ್ನಲ್ ಗೌರವ ಹುದ್ದೆ ಟೆರಿಟೋರಿಯಲ್ ಆರ್ಮಿಯ 106ನೇ ಇನ್‍ಫ್ಯಾಂಟ್ರಿ ಬೆಟಾಲಿಯನ್‍ಗೆ ಸೇರಿದ್ದಾಗಿತ್ತು. ಭಾರತೀಯ ಸೇನೆ ಹೊಂದಿರುವ ಎರಡು ಪ್ಯಾರಾಚೂಟ್ ರೆಜಿಮೆಂಟ್‍ಗಳು ಪೈಕಿ ಇನ್‍ಫ್ಯಾಂಟ್ರಿ ಬೆಟಾಲಿಯನ್ ಒಂದಾಗಿದೆ. ವಿಶೇಷವೆಂದರೆ ಈ ಹಿಂದೆ ಅಂದರೆ 2015ರಲ್ಲಿ ಕೂಡ ಧೋನಿ ಆಗ್ರಾದಲ್ಲಿ ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡದವರೊಂದಿಗೆ ತರಬೇತಿ ಪಡೆದುಕೊಂಡಿದ್ದರು.

ಆಗಸ್ಟ್ 3 ರಿಂದ ಹೋಗುವ ಭಾರತದ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಧೋನಿ ಅವರನ್ನು ಆಯ್ಕೆ ಮಾಡಿಲ್ಲ. ಧೋನಿ ಅವರ ಬದಲಾಗಿ ವಿಕೆಟ್ ಕೀಪರ್ ಆಗಿ ರಿಷಬ್ ಪಂತ್‍ರನ್ನು ಬಿಸಿಸಿಐ ಆಯ್ಕೆ ಮಾಡಿದೆ.