ಅಹಮದಾಬಾದ್: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರ ಎಡಗಾಲಿನ ಮೊಣಕಾಲಿಗೆ ಗಾಯವಾಗಿದ್ದು, ಶುಕ್ರವಾರ ಗುಜರಾತ್ ಟೈಟಾನ್ಸ್ (GT) ವಿರುದ್ಧ ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಆಡುತ್ತಾರೆಯೇ ಎನ್ನುವ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.
ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿರುವ 2023ರ ಐಪಿಎಲ್‌ನ ಮೊದಲ ಪಂದ್ಯ ಆರಂಭಕ್ಕೂ ಮುನ್ನವೇ ಧೋನಿ ಕಾಲಿಗೆ ಪೆಟ್ಟಾಗಿಸಿಕೊಂಡಿದ್ದಾರೆ. ಇದರಿಂದ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಈ ಬಾರಿ ಐಪಿಎಲ್ ಆವೃತ್ತಿ ಮಾಹಿ ವೃತ್ತಿ ಬದುಕಿನ ಕೊನೆಯ ಟೂರ್ನಿಯಾಗಿದ್ದು, ಸಿಎಸ್‌ಕೆ ಕಪ್ ಗೆಲ್ಲಲೇಬೇಕೆಂಬ ಪಣ ತೊಟ್ಟಿದೆ. ಇದನ್ನೂ ಓದಿ: IPL ಉದ್ಘಾಟನಾ ಸಮಾರಂಭದಲ್ಲಿ ಸೊಂಟ ಬಳುಕಿಸಲಿದ್ದಾರೆ ರಶ್ಮಿಕಾ ಮಂದಣ್ಣ, ಮಿಲ್ಕಿ ಬ್ಯೂಟಿ ತಮನ್ನಾ
41 ವರ್ಷದ ಟೀಂ ಇಂಡಿಯಾ ಮಾಜಿ ನಾಯಕ ಚೆನ್ನೈನಲ್ಲಿ ತರಬೇತಿ ವೇಳೆ ಎಡ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಗುರುವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸದಲ್ಲೂ ಅವರು ಪಾಲ್ಗೊಂಡಿಲ್ಲ. ಒಂದು ವೇಳೆ ಮೊದಲ ಪಂದ್ಯಕ್ಕೆ ಧೋನಿ ಗೈರಾದರೆ, ಯಾರ ಹೆಗಲಿಗೆ ನಾಯಕತ್ವ ಬೀಳಲಿದೆ ಅನ್ನೋದು ಕುತೂಹಲವಾಗಿದೆ. ಇದನ್ನೂ ಓದಿ: ಕ್ರಿಕೆಟ್ ಅಭಿಮಾನಿಗಳಿಗೆ ಗುಡ್‌ನ್ಯೂಸ್; ಮಾ.31 ರಿಂದ IPL ಧಮಾಕ – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಈಗಾಗಲೇ ಇಂಗ್ಲೆಂಡ್ ತಂಡದಲ್ಲಿ ಯಶಸ್ವಿ ಆಟಗಾರನಾಗಿ ಗುರುತಿಸಿಕೊಂಡಿರುವ ಆಲ್‌ರೌಂಡರ್ ಬೆನ್‌ಸ್ಟೋಕ್ಸ್ (Ben Stokes), ಟೀಂ ಇಂಡಿಯಾ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಹಾಗೂ ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ನಡುವೆ ಪೈಪೋಟಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಡಿವೊನ್ ಕಾನ್ವೇ ಅಥವಾ ಅಂಬಟಿ ರಾಯುಡು ಅವರಲ್ಲಿ ಒಬ್ಬರು ವಿಕೆಟ್ ಕೀಪರ್ ಆಗಬಹುದು ಎನ್ನಲಾಗಿದೆ. ಆದರೆ, ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್, ನನ್ನ ಪ್ರಕಾರ ಧೋನಿ ಆಡುವುದು ಶೇ 100 ರಷ್ಟು ಖಚಿತ. ಬೇರೆ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ’ ಎಂದಿದ್ದಾರೆ.