ಧೋನಿ ಆಸೆಯಂತೆ ನಡೆಯಲಿದೆ ನಿವೃತ್ತಿ ಪಂದ್ಯ – ಚೆನ್ನೈನಲ್ಲಿ ಐಪಿಎಲ್‍ಗೆ ಗುಡ್ ಬೈ ಹೇಳುವುದು ಖಚಿತ

Public TV
2 Min Read
MS DHONI

ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ತವರಿನ ಅಭಿಮಾನಿಗಳ ಮುಂದೆ ಐಪಿಎಲ್‍ಗೆ (IPL) ನಿವೃತ್ತಿ ಘೋಷಿಸುವುದು ಬಹುತೇಕ ಖಚಿತಗೊಂಡಿದೆ.

MS DHONI

15ನೇ ಆವೃತ್ತಿ ಐಪಿಎಲ್ ಧೋನಿಯ ಕೊನೆಯ ಆವೃತ್ತಿ ಎಂದು ಹೇಳಲಾಗಿತ್ತು. ಆದರೆ ಧೋನಿ ನಾನು 16ನೇ ಆವೃತ್ತಿ ಐಪಿಎಲ್ ಆಡುವುದಾಗಿ ಹೇಳಿದ್ದರು. ಜೊತೆಗೆ ಒಂದು ಮಹತ್ತರವಾದ ಆಸೆಯನ್ನು ವ್ಯಕ್ತಪಡಿಸಿದ್ದರು. ಇದೀಗ ಆ ಆಸೆ ನೆರವೇರುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: 2022ರಲ್ಲಿ ಭಾರತ ಆಡಿದ್ದು 27 ಟಿ20 ಪಂದ್ಯ – ಬುಮ್ರಾ ಆಡಿದ್ದು ಬರೀ 3 ಪಂದ್ಯ!

IPL 2022 CSK 3 1

ಧೋನಿ ಟೀಂ ಇಂಡಿಯಾ ಬಳಿಕ ಅತೀ ಹೆಚ್ಚು ಭಾವನಾತ್ಮಕವಾಗಿ ಸಂಬಂಧವನ್ನು ಹೊಂದಿರುವ ತಂಡವೆಂದರೆ ಅದು ಚೆನ್ನೈ ಸೂಪರ್ ಕಿಂಗ್ಸ್ ತಂಡ. ಐಪಿಎಲ್ 2008ರಲ್ಲಿ ಆರಂಭವಾದ ಬಳಿಕ ಚೆನ್ನೈ ಪರ ಆಡುತ್ತಿರುವ ಧೋನಿ ವಿಶೇಷವಾದ ಸಂಬಂಧವನ್ನು ಚೆನ್ನೈ ತಂಡ ಮತ್ತು ತಮಿಳುನಾಡಿನ ಜನರೊಂದಿಗೆ ಹೊಂದಿದ್ದಾರೆ. ಹಾಗಾಗಿ ತಮ್ಮ ಕೊನೆಯ ಪಂದ್ಯವನ್ನು ಚೆನ್ನೈ ನಗರದ ಎಂ ಚಿದಂಬರಂ ಸ್ಟೇಡಿಯಂನಲ್ಲಿ ತಮ್ಮ ಅಚ್ಚು-ಮೆಚ್ಚಿನ ಪ್ರೇಕ್ಷಕರ ಮುಂದೆ ಆಡಿ ನಿವೃತ್ತಿ ಘೋಷಿಸುವ ಆಸೆಯನ್ನು ಧೋನಿ ವ್ಯಕ್ತಪಡಿಸಿದ್ದರು. ನನ್ನ ಕೊನೆಯ ತವರಿನ ಏಕದಿನ ಪಂದ್ಯ ರಾಂಚಿಯಲ್ಲೇ ನಡೆದಿದ್ದರೆ ನನ್ನ ಕೊನೆಯ ಟಿ20 ಪಂದ್ಯ ಚೆನ್ನೈನಲ್ಲೇ ಇರಬೇಕೆಂದು ಆಶಿಸುತ್ತೇನೆ. ಇದು ಮುಂದಿನ ವರ್ಷ ಆಗಿರುತ್ತಾ ಅಥವಾ ಮುಂದಿನ ಐದು ವರ್ಷದಲ್ಲಿ ಆಗುತ್ತಾ ನಿಜಕ್ಕೂ ಗೊತ್ತಿಲ್ಲ ಎಂದು ಈ ಹಿಂದೆ ಹೇಳಿದ್ದರು. ಇದನ್ನೂ ಓದಿ: ಓಡೆನ್ ಸ್ಮಿತ್, ಬೇಬಿ ಎಬಿಡಿ ಹೊಡಿಬಡಿ ಆಟ – ತಲಾ ಆರಾರು ಎಸೆತ ಐದೈದು ಸಿಕ್ಸ್ 60 ರನ್‌

IPL 2022 CSK 2 1

ಇದೀಗ ಧೋನಿ ಆಸೆಯಂತೆ ಅವರ ಕೊನೆಯ ಪಂದ್ಯ ಚೆನ್ನೈನಲ್ಲೇ ನಡೆಯುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ 2023ರ ಐಪಿಎಲ್ ಪಂದ್ಯಗಳು ತವರಿನ ಚರಣದ ಪಂದ್ಯಗಳೊಂದಿಗೆ ನಡೆಯಲಿದೆ ಎಂದು ಬಿಸಿಸಿಐ (BCCI) ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಸ್ಪಷ್ಟಪಡಿಸಿದ್ದಾರೆ. ಈ ಸುದ್ದಿ ಹೊರಬಿದ್ದ ಬಳಿಕ ಧೋನಿ ನಿವೃತ್ತಿ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ ಎಂಬುದು ಬಹತೇಕ ಖಚಿಗೊಂಡಿದೆ. ಇದು ಧೋನಿ ಅಭಿಮಾನಿಗಳಲ್ಲಿ ಸಂತಸ ತಂದಿದೆ.

csk

2019ರ ಬಳಿಕ ಧೋನಿ ಚೆನ್ನೈನಲ್ಲಿ ಆಡಿಲ್ಲ. ಕೊರೊನಾದಿಂದಾಗಿ (Corona) 2020ರ ಐಪಿಎಲ್ ಯುಎಇನಲ್ಲಿ (UAE) ನಡೆದರೆ, 2021ರ ಐಪಿಎಲ್ ಮೊದಲ ಚರಣ ಭಾರತದಲ್ಲಿ ನಡೆದರೆ, ಎರಡನೇ ಚರಣ ಯುಎಇನಲ್ಲಿ ನಡೆದಿತ್ತು. 2022ರ ಐಪಿಎಲ್ ಮುಂಬೈ ಮತ್ತು ಪುಣೆ ನಗರದಲ್ಲಿ ಮಾತ್ರ ನಡೆದಿತ್ತು. ಇದೀಗ 2023ರ ಐಪಿಎಲ್ ಎಲ್ಲಾ ನಗರದಲ್ಲೂ ನಡೆಯಲಿದ್ದು, ಪ್ರತಿ ತಂಡಗಳಿಗೆ ತವರಿನ ಪಂದ್ಯ ಕೂಡ ಸಿಗಲಿದೆ. ಹಾಗಾಗಿ ಧೋನಿ ಮತ್ತೆ ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಆಡುವ ಬಯಕೆ ಈಡೇರಲಿದೆ. ಇದನ್ನೂ ಓದಿ: ಹಸುಗಳನ್ನು ರಕ್ಷಿಸಿ – ಲಂಪಿ ವೈರಸ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಿಖರ್ ಧವನ್

ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ 2010, 2011, 2018, 2021 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2008, 2012, 2013, 2015, 2019ರಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು. ಧೋನಿ ಆರಂಭಿಕ ಆವೃತ್ತಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಿರುವುದು ವಿಶೇಷ. ಮಧ್ಯದಲ್ಲಿ ಚೆನ್ನೈ ತಂಡ ಐಪಿಎಲ್‍ನಲ್ಲಿ ಬ್ಯಾನ್ ಆದಾಗ ಮಾತ್ರ ಧೋನಿ ಇತರ ಫ್ರಾಂಚೈಸ್ ಪರ ಆಡಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *