– ಧೋನಿ ತಮ್ಮ ಮುಖವನ್ನು ಕನ್ನಡಿಯಲ್ಲಿ ಒಮ್ಮೆ ನೋಡಿಕೊಳ್ಳಲಿ ಅಂತ ಲೇವಡಿ
ಮುಂಬೈ: ನನ್ನ ಮಗನ ಭವಿಷ್ಯಕ್ಕೆ ಅಡ್ಡಗಾಲು ಹಾಕಿದ ಮಹೇಂದ್ರ ಸಿಂಗ್ ಧೋನಿಯನ್ನು (MS Dhoni) ನಾನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಯುವರಾಜ್ ಸಿಂಗ್ (Yuvaraj Singh) ತಂದೆ, ಮಾಜಿ ಕ್ರಿಕೆಟಿಗ ಯೋಗರಾಜ್ ಸಿಂಗ್ (Yograj Singh) ಧೋನಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
Advertisement
ಭಾರತ ತಂಡದ ಪರ ಏಳು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡಿರುವ ಯೋಗರಾಜ್ ಸಿಂಗ್ ಅವರ ತಂದೆ ಸಾರ್ವಜನಿಕವಾಗಿ ಧೋನಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನನ್ನ ಮಗನ ಭವಿಷ್ಯವನ್ನು ಧೋನಿ ಹಾಳು ಮಾಡಿದ್ದಾರೆ. ಹೀಗಾಗಿ ನಾನು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಎಷ್ಟೇ ದೊಡ್ಡ ಕ್ರಿಕೆಟಿಗನಾದರೂ ಧೋನಿ ನನ್ನ ಕ್ಷಮೆಗೆ ಅರ್ಹರಲ್ಲ ಎಂದು ಯೂಟ್ಯೂಬ್ ಚಾನೆಲ್‌ವೊಂದರ ಸಂದರ್ಶನದಲ್ಲಿ ಯೋಗರಾಜ್ ಹೇಳಿದ್ದಾರೆ. ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದನ್ನೂ ಓದಿ: ದರ್ಶನ್ ಗ್ಯಾಂಗ್‌ನ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ
Advertisement
Advertisement
ಧೋನಿ ತಮ್ಮ ಮುಖವನ್ನು ಕನ್ನಡಿಯಲ್ಲಿ ಒಮ್ಮೆ ನೋಡಿಕೊಳ್ಳಲಿ. ಅವರು ದೊಡ್ಡ ಕ್ರಿಕೆಟಿಗನೇ ಇರಬಹುದು. ಆದರೆ ಅವರು ನನ್ನ ಮಗನ ವಿರುದ್ಧ ಏನೆಲ್ಲಾ ಮಾಡಿದ್ದಾನೆ ಎಂಬುದು ಈಗ ಹೊರಗೆ ಬರುತ್ತಿದೆ. ಅದನ್ನು ನನ್ನ ಜೀವನದಲ್ಲಿ ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ. ನಾನು ನನ್ನ ಜೀವನದಲ್ಲಿ 2 ತಪ್ಪುಗಳನ್ನು ಮಾಡಿಲ್ಲ. ಮೊದಲನೆಯದಾಗಿ ಯಾರೇ ತಪ್ಪು ಮಾಡಿದರೂ ನಾನು ಅವರನ್ನು ಕ್ಷಮಿಸಿಲ್ಲ. ಎರಡನೆಯದಾಗಿ ತಪ್ಪು ಮಾಡಿದವರನ್ನು ನಾನು ಯಾವತ್ತಿಗೂ ತಬ್ಬಿಕೊಂಡಿಲ್ಲ. ಅದು ನನ್ನ ಕುಟುಂಬವೇ ಆಗಿರಲಿ, ಮಕ್ಕಳೆ ಆಗಿರಲಿ. ನಾನು ಅದನ್ನು ಒಪ್ಪುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: Kolkata Horror | ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅರೆಸ್ಟ್
Advertisement
ಎಂ.ಎಸ್ ಧೋನಿ ವಿರುದ್ಧ ಯೋಗರಾಜ್ ಸಿಂಗ್ ಈ ರೀತಿಯಾಗಿ ಆರೋಪಿಸಿದ್ದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಧೋನಿಯನ್ನು ಬಹಿರಂಗವಾಗಿ ದೂರಿದ್ದರು. 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಿಎಸ್‌ಕೆ (CSK) ಸೋಲಲು ಧೋನಿಯೇ ಪ್ರಮುಖ ಕಾರಣ. ಅವರಿಗೆ ಅಸೂಯೆ ಜಾಸ್ತಿ ಇದೆ ಎಂದು ಯೋಗರಾಜ್ ಸಿಂಗ್ ಆರೋಪಿಸಿದ್ದರು. ಇದನ್ನೂ ಓದಿ: Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್!