ನವದೆಹಲಿ: ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ಯಾಟಿಂಗ್ ಗೆ 11ನೇ ಸ್ಥಾನದಲ್ಲಿ ಕಳುಹಿಸಿರುವ ಕುರಿತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಈ ಕುರಿತು ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ ಆಟಗಾರರ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್, ಧೋನಿ ನಿಗದಿತ ಓವರ್ ಗಳಲ್ಲಿ ಭಾರತದ ಸರ್ವಶ್ರೇಷ್ಠ ವಿಕೆಟ್ ಕೀಪರ್ ಮತ್ತು ಫಿನಿಶರ್ ಎಂದು ಹೇಳಿದ್ದಾರೆ.
ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಎಂಎಸ್‍ಕೆ ಪ್ರಸಾದ್, ಧೋನಿ ಅವರನ್ನ ತಂಡದಲ್ಲಿದ್ದರಿಂದ ಮಧ್ಯಮ ಕ್ರಮಾಂಕದಲ್ಲಿ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗಿತ್ತು. ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ನಲ್ಲಿ ಆರಂಭಿಕ ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿದ್ದರೆ, ಧೋನಿ ಮತ್ತು ಜಡೇಜಾರನ್ನು ಸರ್ವಶ್ರೇಷ್ಠ ಸಾಲಿನಲ್ಲಿ ಸೇರ್ಪಡೆ ಮಾಡಲಾಗುತಿತ್ತು ಎಂದು ತಿಳಿಸಿದ್ದಾರೆ.
Advertisement
Advertisement
ವಿಶ್ವ ಕಪ್ ಪಂದ್ಯಗಳಲ್ಲಿ ಓರ್ವ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ರೂಪದಲ್ಲಿ ತಂಡದ ದೊಡ್ಡ ಶಕ್ತಿಯಾಗಿದ್ದರು ಎಂಬುದನ್ನು ನಾನು ಯಾವುದೇ ಸಂದೇಹಗಳಿಲ್ಲದೇ ಹೇಳಬಲ್ಲೆ ಎಂದಿದ್ದಾರೆ.
Advertisement
ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ನಲ್ಲಿ 18 ರನ್ ಗಳಿಂದ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಜಡೇಜಾ 77 ರನ್ ಮತ್ತು ಧೋನಿ 50 ರನ್ ಹೊಡೆದಿದ್ದರು.
Advertisement
ವೆಸ್ಟ್ ಇಂಡೀಸ್ ಪ್ರವಾಸದಿಂದ ರಜೆ ತೆಗೆದುಕೊಂಡಿರುವ ಧೋನಿ ಇಂದಿನಿಂದ ಆಗಸ್ಟ್ 15ರವರೆಗೆ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಆರಂಭದ ಮೂರು ದಿನ ಧೋನಿಯವರಿಗೆ ಸೇನೆಯ ಪ್ರಾಥಮಿಕ ತರಬೇತಿಯನ್ನು ನೀಡಲಾಗುತ್ತದೆ. ಇದೇ ವೇಳೆ ಸೇನೆಯ ಬಗ್ಗೆ ಮಾಹಿತಿ, ಫೈರಿಂಗ್ ಸಹ ಹೇಳಿಕೊಡಲಾಗುತ್ತದೆ. ಈ ಬಾರಿಯ ಸ್ವತಂತ್ರ ದಿನಾಚರಣೆಯನ್ನು ಧೋನಿ ಸೈನಿಕರೊಂದಿಗೆ ಆಚರಿಸಲಿದ್ದಾರೆ.