ನವದೆಹಲಿ: ಮುಂಬರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕೆ ಇಳಿಯುವ ಸಾಧ್ಯತೆಯ ಕುರಿತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಮಾತನಾಡಿದ್ದಾರೆ.
ಸದ್ಯ ತಂಡದ ಆರಂಭಿಕನಾಗಿ ಕಣಕ್ಕೆ ಇಳಿಯುತ್ತಿರುವ ಕೆಎಲ್ ರಾಹುಲ್ ಫಾರ್ಮ್ ಸಮಸ್ಯೆ ಆಯ್ಕೆ ಸಮಿತಿಯ ಈ ಚಿಂತನೆಗೆ ಕಾರಣವಾಗಿದೆ. ಉತ್ತಮ ಬ್ಯಾಟಿಂಗ್ ಫಾರ್ಮ್ ಹೊಂದಿದ್ದರೂ ರೋಹಿತ್ ಶರ್ಮಾ ಅವರಿಗೆ ವೆಸ್ಟ್ ಇಂಡೀಸ್ ಟೂರ್ನಿಯಲ್ಲಿ ಆಡುವ 11ರ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ.
Advertisement
Advertisement
ಈ ಕುರಿತು ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಎಂಎಸ್‍ಕೆ ಪ್ರಸಾದ್, ವಿಂಡೀಸ್ ಸರಣಿಯ ಬಳಿಕ ಆಯ್ಕೆ ಸಮಿತಿ ಸಭೆ ನಡೆದಿಲ್ಲ. ಮುಂದಿನ ಸಭೆಯಲ್ಲಿ ರೋಹಿತ್ ಅವರನ್ನು ಆರಂಭಿಕರಾಗಿ ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.
Advertisement
ರಾಹುಲ್ ಪ್ರತಿಭಾನ್ವಿತ ಆಟಗಾರರಾಗಿದ್ದು, ಟೆಸ್ಟ್ ಪಂದ್ಯಗಳಲ್ಲಿ ಅವರು ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಎಂಎಸ್‍ಕೆ ಪ್ರಸಾದ್ ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೇ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಕ್ರಮವಾಗಿ 13, 6, 44, 38 ರನ್ ಗಳಿಸಿದ್ದರು. ಇತ್ತ ವಿಂಡೀಸ್ ಟೂರ್ನಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಲು ಅವಕಾಶ ಪಡೆದ ರಹಾನೆ, ವಿಹಾರಿ ಉತ್ತಮ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದರು. ಪರಿಣಾಮ ಇದುವರೆಗೂ ಟೆಸ್ಟ್ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದ ರೋಹಿತ್ ಆರಂಭಿಕರಾಗಿ ಅವಕಾಶ ಪಡೆಯುವ ಸಾಧ್ಯತೆ ಇದೆ.