ಆನೇಕಲ್: ಮಂತ್ರಿ ಸ್ಥಾನ ಸಿಗದಿದ್ದರೆ ರಾಜೀನಾಮೆ ಅಥವಾ ಪಕ್ಷ ಬದಲಾವಣೆ ಮಾಡುವಂತೆ ಕಾರ್ಯಕರ್ತರು ಸೂಚಿಸಿದರೆ ಅದಕ್ಕೆ ನಾನು ಸಿದ್ದವೆಂದು ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು ಮಂತ್ರಿ ಮಂಡಲದ ವಿಸ್ತರಣೆ ಮಾಡುವಾಗ ನಿಮಗೂ ಯಾವುದಾದರೂ ಒಂದು ಅವಕಾಶ ಕೊಡುತ್ತೇವೆ ಎಂದು ಹೈಕಮಾಂಡ್ ಹೇಳಿದರು. ವಿದೇಶದಿಂದ ಬಂದ ಬಳಿಕ ಸಿದ್ದರಾಮಯ್ಯ ಅವರು ಏನೂ ಮಾತನಾಡಿಲ್ಲ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನನ್ನೊಂದಿಗೆ ಮಾತಾಡಿದ್ದಾರೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ. ನ್ಯಾಯ ಸಿಗದಿದ್ದರೆ ನನ್ನ ದಾರಿ ನನಗೆ ಎಂದು ಗುಡುಗಿದ್ದಾರೆ.
Advertisement
Advertisement
ದಿನೇಶ್ ಗುಂಡೂರಾವ್ ಅವರು ಸಂಧಾನ ಮಾಡುತ್ತಿದ್ದು ಇವತ್ತು ಕೂಡ ಮಾತನಾಡಲು ಕರೆದಿದ್ದಾರೆ ಹೀಗಾಗಿ ಹೋಗುತ್ತಿದ್ದೇನೆ. ಸೋಮವಾರ ಸಿದ್ದರಾಮಯ್ಯ, ಜಾರಕಿಹೊಳಿ, ಸುಧಾಕರ್ ಅವರೆಲ್ಲಾ ಮಾತುಕತೆ ಮಾಡಿದ್ದಾರೆ. ಆದರೆ ಏನೂ ಮಾಡಿದ್ದಾರೆ ಎಂಬುದರ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ ಎಂದರು.
Advertisement
ನಮಗೂ ನಮ್ಮ ಪಕ್ಷದ ಕಾರ್ಯಕರ್ತರಿಗೆ ಬೇಸರ ಇದೆ. ಏಕೆಂದರೆ ನಾಲ್ಕು ಬಾರಿ ಹೊಸಕೋಟೆಯಲ್ಲಿ ಸ್ಪರ್ಧಿಸಿದ್ದು, 3 ಬಾರಿ ಗೆದ್ದಿದ್ದೇನೆ. ಜನರು ನನ್ನನ್ನು ಶಾಸಕರಾಗಿ ಆಯ್ಕೆ ಮಾಡಿದ್ದಾರೆ. ನನಗಿಂತ ಚಿಕ್ಕವರೆಲ್ಲಾ ಕಾಂಗ್ರೆಸ್ ನಲ್ಲಿ ಮಂತ್ರಿ ಗಳಾಗಿದ್ದಾರೆ. 2 ಬಾರಿ ಶಾಸಕರಾದವರು 2 ಬಾರಿ ಮಂತ್ರಿಗಳಾಗಿದ್ದಾರೆ. ಜೆಡಿಎಸ್ ನಿಂದ ಬಂದವರು ಕಾಂಗ್ರೆಸ್ ನಲ್ಲಿ ಮಂತ್ರಿಗಳಾಗಿದ್ದಾರೆ. ನಾನು 35 ವರ್ಷಗಳಿಂದ ಪ್ರಾಮಾಣಿಕವಾಗಿ ನಗರ ಸಭೆ ಸದಸ್ಯನಾಗಿ ಕೆಲಸ ಮಾಡಿದ್ದರಿಂದ ಏನೋ ಕಾಂಗ್ರೆಸ್ ನಿರ್ಲಕ್ಷ್ಯ ಮಾಡುತ್ತಿದೆ. ಇದರಿಂದ ಕಾರ್ಯಕರ್ತರೆಲ್ಲ ಬೇಸರಗೊಂಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv