ಹೊಸಕೋಟೆ: ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಸೂಲಿಬೆಲೆಯಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ನಾಗಿಣಿ ಡ್ಯಾನ್ಸ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದ ಸಮಾವೇಶದಲ್ಲಿ ಅಲ್ಪಸಂಖ್ಯಾತ ಅಭಿಮಾನಿಗಳ ಒತ್ತಾಯದ ಮೇರೆಗೆ ಸಚಿವ ಎಂಟಿಬಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ಅಭಿಮಾನಿಗಳು ಡ್ಯಾನ್ಸ್ ಮಾಡಲು ನಿಂಬೆಹಣ್ಣು ಕೊಟ್ಟಿದ್ದರು. ಆದರೆ ನಿಂಬೆಹಣ್ಣು ಜೇಬಿನಲ್ಲಿಟ್ಟುಕೊಂಡು ನಾಗಿಣಿ ಹಾಡಿಗೆ ಎಂಟಿಬಿ ನಾಗರಾಜ್ ಸ್ಟೆಪ್ ಹಾಕಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್
Advertisement
Advertisement
ಮಂಗಳವಾರ ಬಿಜೆಪಿ ಅಲ್ಪಸಂಖ್ಯಾತರು ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಭಾಗವಹಿಸಿದ್ದರು. ಇದೀಗ ಈ ಡ್ಯಾನ್ಸ್ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆಯೂ ಎಂಟಿಬಿ ನಾಗರಾಜ್ ನಾಗಿಣಿ ಡ್ಯಾನ್ಸ್ ಮೂಲಕ ಹಲವು ಭಾರೀ ಸುದ್ದಿಯಾಗಿದ್ದರು. ಇದನ್ನೂ ಓದಿ: ಮೈಸೂರು ಅಭಿವೃದ್ಧಿ ಬಗ್ಗೆ ಸಿದ್ದರಾಮಯ್ಯರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ: ಪ್ರತಾಪ್ ಸಿಂಹ ಆಹ್ವಾನ