ಬೆಂಗಳೂರು: ನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್ ಜಡ್ಜ್‌ಮೆಂಟ್ (Political Judgement). ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ (Zameer Ahmed) ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತನಿಖೆ ನಡೆದರೆ ಸತ್ಯಾಂಶ ಆಚೆ ಬರುತ್ತೆ ತಾನೆ? ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದು ತಿಳಿಸಿದರು.
ನೂರಕ್ಕೆ ನೂರು ಸಿದ್ದರಾಮಯ್ಯ (Siddaramaiah) ಅವರ ತಪ್ಪು ಇಲ್ಲ. ಸಿಎಂ ಮೇಲೆ ರಾಜಕೀಯ (Politics) ನಡೆಯುತ್ತಿದೆ. ಲೋಕಾಯುಕ್ತ ತನಿಖೆ ನಡೆಯಲಿ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು – ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಮೋದಿ ಆಗ್ರಹ
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ 5 ವರ್ಷ ಇರುತ್ತಾರೆ. ಯಾರಿಂದಲೂ ಅಲ್ಲಾಡಿಸಲು ಸಾಧ್ಯವಾಗುವುದಿಲ್ಲ ಎಂದು ಸಿಎಂ ಪರ ಬ್ಯಾಟ್ ಬೀಸಿದರು. ಇದನ್ನೂ ಓದಿ: ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂತೋಷ್ ಹೆಗ್ಡೆ
ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು.