– ಮುಡಾ ಕೇಸ್ ಸಿಬಿಐ ತನಿಖೆ ಆದೇಶಿಸಿ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕ್ತೇವೆ
ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಇಂದೇ ಎಫ್‌ಐಆರ್ ದಾಖಲಾಗಬೇಕು. ವೆಬ್‌ಸೈಟ್‌ನಲ್ಲಿನ ಆದೇಶ ಪ್ರತಿಯಿಂದಲೇ ಎಫ್‌ಐಆರ್ ಮಾಡಿಕೊಳ್ಳಬಹುದು. ಇವತ್ತೇ ಎಫ್‌ಐಆರ್ ದಾಖಲಾಗುತ್ತದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಮೈಸೂರಿನಲ್ಲಿ (Mysuru) ಹೇಳಿದ್ದಾರೆ.
Advertisement
ಈ ಬಗ್ಗೆ ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದ ಅವರು, ನಮಗೆ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ಹೀಗಾಗಿ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ (CBI) ಕೊಡಿ ಎಂದು ಹೈಕೋರ್ಟ್‌ಗೆ ಇವತ್ತು ಅಥವಾ ನಾಳೆ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಗೆ ನಾಲ್ವರು ಸಾವು; ಶಾಲಾ-ಕಾಲೇಜುಗಳಿಗೆ ರಜೆ
Advertisement
Advertisement
ಸಿಎಂ ಮೇಲಿನ ಮುಡಾ ಕೇಸ್‌ನಲ್ಲಿ (MUDA Scam) ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ. ಹೀಗಾಗಿ, ವಿಚಾರಣೆ ಸಿಬಿಐಗೆ ಕೊಡಿ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕುವುದಾಗಿ ತಿಳಿಸಿದ್ದಾರೆ.
Advertisement
ಮುಡಾ ನಿವೇಶನ ಹಂಚಿಕೆಯಲ್ಲಿ ಪ್ರಭಾವ ಬೀರಿದ್ದಾರೆಂಬ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತಗೆ ಹೈಕೋರ್ಟ್ ಆದೇಶ ಹೊರಡಿಸಿದೆ. 3 ತಿಂಗಳ ಒಳಗೆ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ಗಡುವು ವಿಧಿಸಿದೆ. ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಥೈಲ್ಯಾಂಡ್ ಗ್ರೀನ್ ಸಿಗ್ನಲ್ – ಸಲಿಂಗ ವಿವಾಹ ಮಸೂದೆಗೆ ಸಹಿ ಹಾಕಿದ ರಾಜ
ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಹೊರಬೀಳುತ್ತಿದ್ದಂತೆ ಬಿಜೆಪಿ-ಜೆಡಿಎಸ್ ನಾಯಕರು, ಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ ಸಂಕಷ್ಟ; ಹೈಕಮಾಂಡ್‌ಗೆ ವರದಿ ನೀಡಿದ ಸಿಎಂ ಸಿದ್ದರಾಮಯ್ಯ