ಗದಗ: ಮುಡಾ ಸೈಟು (MUDA Site) ಹಂಚಿಕೆ ಪ್ರಕರಣವನ್ನು ಸಿಬಿಐ (CBI) ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿದರೆ ಸತ್ಯ ಹೊರಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.
ಗದಗದಲ್ಲಿ (Gadag) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಇದರ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆಯಾಗಬೇಕು. ಒಂದು ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಬೇಕು. ಬೇರೆ ಬೇರೆ ಸರ್ಕಾರದ ಸ್ಕೀಂನಲ್ಲಿ ಜಮೀನು ಹಂಚಿಕೆಯಾಗಿರುತ್ತದೆ. ಸ್ಕೀಮ್‌ನ ನ್ಯಾಯ ಸಮ್ಮತವಾಗಿ ಮಾಡಿಕೊಂಡಿದ್ದರೆ ತಕರಾರಿಲ್ಲ. ಆದರೆ ಸ್ಕೀಂ ಬದಲಾವಣೆ ಮಾಡಿಕೊಂಡರೆ ತನಿಖೆಯಿಂದ ಹೊರಬರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮುಂದಿನ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಆಷಾಢ ಪೂಜೆ ಆರಂಭ – ವಿಶೇಷ ಪಾಸ್ ರದ್ದು
Advertisement
Advertisement
ಡೆಂಗ್ಯೂ ಎದುರಿಸುವಲ್ಲಿ ವಿಫಲ:
ಡೆಂಗ್ಯೂ ಜ್ವರ ಎದುರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸರ್ಕಾರ ಬಡವರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ಡೆಂಗ್ಯೂ ಪ್ರಕರಣಗಳು ಒಂದೂವರೆ ತಿಂಗಳಿನಿಂದ ಪ್ರಾರಂಭವಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ, ಆರೋಗ್ಯ ಇಲಾಖೆ, ಡಿಹೆಚ್‌ಓಗಳು ತೆಗೆದುಕೊಳ್ಳಬೇಕಿತ್ತು. ಆದರೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಎರಡನೇ ವಿಮಾನ ನಿಲ್ದಾಣದ ಬಗ್ಗೆ ವಿಸ್ತೃತ ಚರ್ಚೆ ಬಳಿಕ ಸೂಕ್ತ ತೀರ್ಮಾನ: ಎಂ.ಬಿ.ಪಾಟೀಲ್
Advertisement
Advertisement
ಹೊಸ ಮಳೆ ಬಂದಾಗ ನಿಂತ ನೀರಿನಿಂದ ಬರುವ ರೋಗವಿದು. ಜಾಗೃತಿ ಮೂಡಿಸುವುದು, ಔಷಧ ಸಿಂಪಡಿಸುವ ಕೆಲಸ ಮಾಡಬೇಕಿತ್ತು. ಆ ಕೆಲಸ ಮಾಡಿಲ್ಲ. ಡೆಂಗ್ಯೂ ಜ್ವರ ಬಂದರೂ ಅವುಗಳನ್ನು ಬೇರೆ ಕೆಟಗರಿಗಳಲ್ಲಿ ಹಾಕಿ ಡೆಂಗ್ಯೂ ಕಡಿಮೆ ಇದೆ ಅಂತ ತೋರಿಸುವ ಪ್ರಯತ್ನ ಮಾಡಿದರು. ಟೆಸ್ಟ್ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಈಗಲೂ ಟೆಸ್ಟ್ ಕಡಿಮೆ ಆಗುತ್ತಿವೆ. ಸರ್ಕಾರದ ಅಧಿಕೃತ ಸಂಖ್ಯೆ 7,000 ಇದೆ ಎನ್ನುತ್ತಿದ್ದಾರೆ. ಆದರೆ ಇದರ ಎರಡು ಪಟ್ಟು ರೋಗಿಗಳ ಸಂಖ್ಯೆ ಇದೆ. ಅದನ್ನು ಮುಚ್ಚಿಟ್ಟಿದ್ದಾರೆ. ಸಾಕಷ್ಟು ಸಾವು ನೋವು ಆಗುತ್ತಿದೆ. ಆರೋಗ್ಯ ಇಲಾಖೆಯ ಮಂತ್ರಿಗಳು, ಅಧಿಕಾರಿಗಳು ಕೇವಲ ಸಭೆ ಮಾಡಿ ಎಲ್ಲಾ ಸರಿ ಇದೆ ಎಂಬ ಭಾವನೆಯಲ್ಲಿದ್ದಾರೆ. ಚಿಕಿತ್ಸೆ, ಔಷಧಿ, ಟೆಸ್ಟ್ ಸರಿಯಾಗಿ ಮಾಡಬೇಕು. ಅನೇಕ ಜಿಲ್ಲಾ ಆಸ್ಪತ್ರೆಗಳಲ್ಲಿ ತಪಾಸಣೆ, ಸರಿಯಾದ ಔಷಧ ವ್ಯವಸ್ಥೆ ಇಲ್ಲ. ಇನ್ನು ತಾಲೂಕಿನ ಆಸ್ಪತ್ರೆಗಳಲ್ಲಿ ಕೇಳುವವರಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೆರೆ ಕಟ್ಟೆ ತುಂಬಿಸಲು ನಾಳೆ ಸಂಜೆಯಿಂದ ಕೆಆರ್‌ಎಸ್‌ನಿಂದ ವಿ.ಸಿ.ನಾಲೆಗೆ ನೀರು
ಸಾರ್ವಜನಿಕರು, ಬಡವರು ಸೇರಿದಂತೆ ಸಾಕಷ್ಟು ಸಾವು-ನೋವುಗಳಾಗಿವೆ. ಅತ್ಯಂತ ಚಿಂತಾಜನಕವಾದ ಪರಿಸ್ಥಿತಿ ರಾಜ್ಯದಲ್ಲಿ ಎದುರಾಗಿದೆ. ಕೂಡಲೇ ಯುದ್ದೋಪಾದಿಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಮಾಡಿ ಡೆಂಗ್ಯೂ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಹಳ ದೊಡ್ಡ ಪ್ರಮಾಣದಲ್ಲಿ ಹಬ್ಬಿದರೆ ಮುಂದೆ ಬೇರೆ ರೋಗಕ್ಕೂ ಅಂಟಿಕೊಳ್ಳುತ್ತದೆ. ಈ ರೋಗದಿಂದ ಗುಣಮುಖರಾಗಲು ಮೂರು ಅಥವಾ ಆರು ತಿಂಗಳು ಬೇಕಾಗುತ್ತದೆ. ಆದ್ದರಿಂದ ಇದನ್ನು ವಾರ್ ಫುಂಟಿಗ್‌ನಲ್ಲಿ ತೆಗೆದುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಗಮನಿಸಿ ಎಂದು ಆರೋಗ್ಯ ಸಚಿವರನ್ನು ಒತ್ತಾಯಿಸಿದರು. ಇದನ್ನೂ ಓದಿ: ಹೊಸ ಕ್ರಿಮಿನಲ್ ಕಾನೂನಿನಡಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಸ್ ದಾಖಲು
ಸರ್ಕಾರ ತಕ್ಷಣ ಟೆಸ್ಟ್ ಹೆಚ್ಚಿಸಿ, ಔಷಧ, ಚುಚ್ಚುಮದ್ದು ಹೆಚ್ಚಿನ ರೀತಿಯಲ್ಲಿ ಸರಬರಾಜು ಮಾಡಬೇಕು. ಇದನ್ನು ಪ್ರಾರಂಭಿಕ ಹಂತದಲ್ಲೇ ತಡಗಟ್ಟಬೇಕಿತ್ತು. ಬಡವರಿಗೆ ತಪಾಸಣೆ ಮಾಡಿಸುವ, ಚಿಕಿತ್ಸೆ ಪಡೆಯುವ ಸ್ಥಿತಿ ಇಲ್ಲ. ಆದ್ದರಿಂದ ಸರ್ಕಾರ ಎಲ್ಲರಿಗೂ ಉಚಿತ ತಪಾಸಣೆ ವ್ಯವಸ್ಥೆ ಮಾಡಬೇಕು ಎಂದರು. ಇದನ್ನೂ ಓದಿ: ಸಂಸದ ಸುಧಾಕರ್ ಅಭಿನಂದನಾ ಸಮಾವೇಶದಲ್ಲಿ ಎಣ್ಣೆ, ಬಾಡೂಟಕ್ಕೆ ಮುಗಿಬಿದ್ದ ಜನ