ಮೈಸೂರು/ಧಾರವಾಡ: ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ, ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ (MUDA Case) ತನಿಖೆಯನ್ನು ಸಿಬಿಐಗೆ ವಹಿಸಲು ಧಾರವಾಡ ಹೈಕೋರ್ಟ್ (Dahrwad High Court) ನಿರಾಕರಿಸಿದ್ದರ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ. ಆದ್ರೆ ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಹೇಳಿದ್ದಾರೆ.
Advertisement
Advertisement
ನ್ಯಾಯಾಲಯ ಯಾವ ವಿಚಾರವನ್ನಿಟ್ಟುಕೊಂಡು ಸಿಬಿಐ ತನಿಖೆಗೆ ಕೊಡಲು ನಿರಾಕರಿಸಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಬಳಿಕ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಅವರು ಹೇಳಿದಂತೆ ತನಿಖೆ ನಡೆಯುತ್ತಿದೆ ಎಂಬ ಅನುಮಾನ ಇತ್ತು. ಅದಕ್ಕಾಗಿ ನಾವು ಸಿಬಿಐಗೆ ಹೋಗಬೇಕೆಂದು ಹೋರಾಟ ಮಾಡ್ತೀವಿ. ಮುಂದಿನ ವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಪ್ರಕರಣವನ್ನ ಸಿಬಿಐಗೆ ನೀಡುವಂತೆ ಹೋರಾಟ ಮಾಡ್ತೀವಿ ಎಂದು ತಿಳಿಸಿದ್ದಾರೆ.
Advertisement
Advertisement
ಯುದ್ಧದಲ್ಲಿ ಸೋಲು ಗೆಲುವು ಸಹಜ. ಇದುವರೆಗೆ ನಾವು ಗೆದ್ದಿದ್ದೆವು, ಈಗ ಸಣ್ಣ ಹಿನ್ನಡೆಯಾಗಿದೆ ಅಷ್ಟೇ. ಇದರಿಂದ ನಾನು ವ್ಯತಿರಿಕ್ತವಾಗುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್ ಮುಡಾ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುತ್ತದೆ ಎಂಬ ನಂಬಿಕೆಯಿದೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಬ್ರ್ಯಾಂಡ್ ನೇಮ್ ಚೇಂಜ್; ‘ಎಟರ್ನಲ್’ ಎಂದು ಹೆಸರು ಬದಲಿಸಿಕೊಂಡ Zomato
ಇನ್ನೂ ಕೋರ್ಟ್ ತೀರ್ಪಿನ ಕುರಿತು ಸ್ನೇಹಮಹಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ ರಾವ್ ಕುಲಕರ್ಣಿ, ವಕೀಲೆ ಪೂಜಾ ಸವದತ್ತಿ ʻಪಬ್ಲಿಕ್ ಟಿವಿʼಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ, ಮುಡಾ ಕೇಸ್ ಸಿಬಿಐಗೆ ಹೋಗೋದು ನಿಶ್ಚಿತ: ಸ್ನೇಹಮಹಿ ಕೃಷ್ಣ
ತೀರ್ಪು ನಮ್ಮ ಪರವಾಗಿ ಭರವಸೆ ಇತ್ತು, ನಾವು ಕೂಡ ಸಾಕಷ್ಟು ತಯಾರಿ ಮಾಡಿಕೊಂಡೇ ವಾದ ಮಂಡನೆ ಮಾಡಿದ್ದೆವು. ಆದರೆ ಅರ್ಜಿ ಯಾಕೆ ವಜಾ ಆಗಿದೆ ಎನ್ನುವ ಸಂಪೂರ್ಣ ಮಾಹಿತಿ ಇನ್ನೂ ಗೊತ್ತಾಗಿಲ್ಲ. ತೀರ್ಪಿನ ಆದೇಶ ಪ್ರತಿ ಅಧಿಕೃತವಾಗಿ ನಮ್ಮ ಕೈಗೆ ಸಿಕ್ಕಿಲ್ಲ. ಆದೇಶ ಪ್ರತಿಗಾಗಿ ಮನವಿ ಸಲ್ಲಿಕೆ ಮಾಡಿದ್ದೇವೆ. ಇಂದು ಸಂಜೆ ಸಿಗುವ ಭರವಸೆಯಿದೆ. ಸದ್ಯ ಹೈಕೋರ್ಟ್ ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ಹೇಳಿದ್ದಾರೆ. ಇದನ್ನೂ ಓದಿ: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್