ಇಂದಿನಿಂದ ಸಿಎಂ ವಿರುದ್ಧ ಮುಡಾ ತನಿಖೆ ಆರಂಭ

Public TV
2 Min Read
MUDA Case Siddaramaiah

ಬೆಂಗಳೂರು/ಮೈಸೂರು: ಮುಡಾ ಪ್ರಕರಣಕ್ಕೆ (MUDA Case) ಸಂಬಂಧಿಸಿದಂತೆ ಇಂದಿನಿಂದ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಲೋಕಾಯುಕ್ತ ಪೊಲೀಸರು (Lokayukta Police) ತನಿಖೆ ಆರಂಭಿಸಲಿದ್ದಾರೆ.

ಈಗಾಗಲೇ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಲಿದೆ. ದೂರುದಾರರ ಬಳಿ ದಾಖಲೆಯನ್ನು ಪೊಲೀಸರು ಸಂಗ್ರಹಿಸಲಿದ್ದಾರೆ.

ಇನ್ನೊಂದು ಕಡೆ ನಿವೃತ್ತ ನ್ಯಾ. ದೇಸಾಯಿ ತನಿಖಾ ಸಮಿತಿ ಬಳಿಯಿರುವ ದಾಖಲೆ ಪಡೆಯಲು ಕಾನೂನು ಪ್ರಕ್ರಿಯೆ ಆರಂಭವಾಗಲಿದೆ. ಆ ದಾಖಲೆಗಳು ಸಿಕ್ಕ ಮೇಲೆ ಆರೋಪಿಗಳಿಗೆ ಹಂತ ಹಂತವಾಗಿ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: ಬಿಗ್‌ ಬಾಸ್ ಸಮೀರ್ ಆಚಾರ್ಯ ದಾಂಪತ್ಯದಲ್ಲಿ ಕಲಹ – ಹೊಡೆದಾಡಿಕೊಂಡ ಜೋಡಿಯನ್ನು ಒಂದು ಮಾಡಿದ ಪೊಲೀಸರು!

 

ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದರು.

ಯಾರ ವಿರುದ್ಧ ಎಫ್‌ಐಆರ್‌?
* ಸಿದ್ದರಾಮಯ್ಯ, ಮುಖ್ಯಮಂತ್ರಿ (A1)
* ಪಾರ್ವತಿ ಬಿಎಂ, ಸಿದ್ದರಾಮಯ್ಯ ಪತ್ನಿ(A2)
* ಮಲ್ಲಿಕಾರ್ಜುನ ಸ್ವಾಮಿ, ಸಿದ್ದರಾಮಯ್ಯ, ಬಾಮೈದ(A3)
* ದೇವರಾಜು, ಮಾರಾಟಗಾರ, ನಕಲಿ ಭೂ ಮಾಲೀಕ (A4)
* ಇತರರು‌

 

ಯಾವೆಲ್ಲ ಕಾಯ್ದೆ, ಐಪಿಸಿ ಸೆಕ್ಷನ್‌ ಅಡಿ ಎಫ್‌ಐಆರ್?
– ಭ್ರಷ್ಟಾಚಾರ ತಡೆ ಕಾಯ್ದೆ 1988
– ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988
– ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲು
– ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ
– ಸೆಕ್ಷನ್ 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು
– ಸೆಕ್ಷನ್ 403 ಆಸ್ತಿಯ ದುರ್ಬಳಕೆ
– ಸೆಕ್ಷನ್ 406 ನಂಬಿಕೆಯ ಉಲ್ಲಂಘನೆ
– ಸೆಕ್ಷನ್ 420 ವಂಚನೆ
– ಸೆಕ್ಷನ್ 426 ದುಷ್ಕೃತ್ಯವೆಸಗುವುದು
– ಸೆಕ್ಷನ್ 465 ಫೋರ್ಜರಿ
– ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಫೋರ್ಜರಿ
– ಸೆಕ್ಷನ್ 340 ಅಕ್ರಮ ಬಂಧನ
– ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು

 

Share This Article