– ಮುಡಾ ಮಾಜಿ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ವಿರುದ್ಧ ದೂರು
ಬೆಂಗಳೂರು: ನಿವೇಶನ ಅಕ್ರಮ ಆರೋಪ ಪ್ರಕರಣ ಸಂಬಂಧ ಮುಡಾ ಮಾಜಿ ಆಯುಕ್ತರ ವಿರುದ್ಧ ಬಿಜೆಪಿ ಲೋಕಾಯುಕ್ತ (Lokayukta) ಮೆಟ್ಟಿಲೇರಿದೆ. ಪ್ರಾಧಿಕಾರಕ್ಕೆ ನಷ್ಟ ಉಂಟು ಮಾಡಿರುವ ಹಿಂದಿನ ಆಯುಕ್ತರುಗಳಾದ ನಟೇಶ್ ಮತ್ತು ಜಿ.ಟಿ ದಿನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಬಂಧಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ (TS Srivatsa) ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಪ್ರಾಧಿಕಾರದ ನಿವೇಶನಗಳನ್ನು (MUDA Site) ಕಾನೂನು ಬಾಹಿರವಾಗಿ ಹಾಗೂ ಅಕ್ರಮವಾಗಿ 50:50 ಅನುಪಾತದಲ್ಲಿ ಸರಿ ಸುಮಾರು 5.00 ಲಕ್ಷ ಚದರ ಅಡಿಗೂ ಹೆಚ್ಚಿನ ನಿವೇಶನಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿರುವುದು ಕಂಡುಬಂದಿದೆ. ಇಂತಹ ಅಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 5 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ. ಇದನ್ನೂ ಓದಿ: MUDA Scam | ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ – ಕೋವಿಡ್ ಹಗರಣ ವರದಿಗೆ ಉತ್ತರ ಕೊಡ್ತೇವೆ: ಬೊಮ್ಮಾಯಿ
ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವಂತಹ ಪ್ರಾಧಿಕಾರದ ಈ ಹಿಂದಿನ ಆಯುಕ್ತರಗಳಾದ ನಟೇಶ್ ಮತ್ತು ಜಿ.ಟಿ. ದಿನೇಶ್ ಕುಮಾರ್ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿರುವಂತಹ ಇತರೆ ಅಧಿಕಾರಿಗಳ ವಿರುದ್ಧ ತನಿಖೆ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಈ ಕೂಡಲೇ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ವರ್ಗದವರನ್ನು ಬಂಧಿಸಿ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಸದರಿ ಅಧಿಕಾರಿಗಳಿಂದಲೇ ಭರಿಸುವಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಶಾಸಕ ಟಿ.ಎಸ್ ಶ್ರೀವತ್ಸ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಾ ಮಳೆಗೆ ಅವಾಂತರ – ಸೋಮವಾರ ಬೀದರ್ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ
ಜತೆಗೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧವೂ ಕ್ರಮಕ್ಕೆ ಶಾಸಕ ಶ್ರೀವತ್ಸ ದೂರಿನಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಜಲ ಜೀವನ್ ಮಿಷನ್ ಯೋಜನೆಯಲ್ಲೂ ಅಕ್ರಮ ಆರೋಪ – 116 ಟೆಂಡರ್ ಹಣ ಮುಟ್ಟುಗೋಲು