ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ?

Public TV
1 Min Read
marigowda MUDA president

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆ ಆರೋಪ ಹಿನ್ನೆಲೆ ಮುಡಾ ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಯಾವುದೇ ಕ್ಷಣದಲ್ಲಿ ಮರೀಗೌಡ (Marigowda) ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಮುಡಾದಲ್ಲಿ 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ ಪ್ರಕರಣದ ಪರಿಣಾಮ ತಟ್ಟಿದಂತಾಗಿದೆ. ಇದನ್ನೂ ಓದಿ: ಮಹಿಷಾಸುರನ ರೀತಿ ನೀವು ಸಂಹಾರ ಆಗ್ತೀರಾ: ಸಿಎಂ ವಿರುದ್ಧ ಈಶ್ವರಪ್ಪ ಕಿಡಿ

MUDA 1

ಸಿಎಂ ಸಿದ್ದರಾಮಯ್ಯ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ತೀವ್ರ ಮುಜುಗರಕ್ಕೆ ಒಳಗಾಗಿದೆ.

ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮರೀಗೌಡಗೆ ಸೂಚನೆ ನೀಡಲಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಇದನ್ನೂ ಓದಿ: 3 ಕ್ಷೇತ್ರಗಳ ಉಪಚುನಾವಣೆಯನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ: ಸಿಎಂ

Share This Article