ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಹಲವು ಸಂಘಟನೆಗಳು, ಕಾಂಗ್ರೆಸ್ ಶಾಸಕರು, ಸಚಿವರು ಬೆಂಬಲ ನೀಡಿದ್ದಾರೆ. ಈ ನಡುವೆ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಸಹ ಸಿಎಂ ಬೆನ್ನಿಗೆ ನಿಂತಿದೆ.
ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟದವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು.
* ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು, ಕನಕ ಪೀಠ ಕಾಗಿನೆಲೆ.
* ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಶ್ರೀ ಜಗದ್ಗುರು ಕುಂಚಿಟಿಗ… pic.twitter.com/5huTS7fSBC
— CM of Karnataka (@CMofKarnataka) August 25, 2024
Advertisement
ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟದ ಸ್ವಾಮೀಜಿಗಳು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದ್ದಾರೆ.
Advertisement
ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ 10 ಸ್ವಾಮೀಜಿಗಳನ್ನೊಳಗೊಂಡ ನಿಯೋಗ ಸಿದ್ದರಾಮಯ್ಯ ಅವರಿಗೆ ಆತ್ಮಸ್ಥೈರ್ಯ ತುಂಬಿತು. ಇದೇ ವೇಳೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕ್ರಮವನ್ನು ಒಕ್ಕೂಟ ಖಂಡಿಸಿತು.
Advertisement
Advertisement
ಸಿಎಂಗೆ ಯಾರೆಲ್ಲಾ ಬೆಂಬಲ್ಲ?
* ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು, ಕನಕ ಪೀಠ ಕಾಗಿನೆಲೆ.
* ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ.
* ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು, ಭೋವಿ ಗುರುಪೀಠ ಚಿತ್ರದುರ್ಗ.
* ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು, ಮಾದರ ಚನ್ನಯ ಗುರುಪೀಠ ಚಿತ್ರದುರ್ಗ.
* ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಭಗಿರಥ ಪೀಠ ಮಧುರೆ.
* ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಕನಕ ಗುರುಪೀಠ ಹೊಸದುರ್ಗ.
* ಶ್ರೀ ರೇಣುಕಾನಂದ ಸ್ವಾಮಿಗಳು, ನಾರಾಯಣ ಗುರುಪೀಠ ಶಿವಮೊಗ್ಗ.
* ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು, ಮಡಿವಾಳ ಗುರುಪೀಠ ಚಿತ್ರದುರ್ಗ.
* ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು, ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ.
* ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು, ಸರೂರು ವಿಜಯನಗರ.
ಈ ಎಲ್ಲಾ ಪೂಜ್ಯರು ನಿಯೋಗದ ಪರವಾಗಿ ಉಪಸ್ಥಿತರಿದ್ದು, ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿ, ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿಗಳ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.
ರಾಜ ಭವನ ಚಲೋ ಕುರಿತು ಪೂರ್ವಭಾವಿ ಸಭೆ:
ಅಲ್ಲದೇ ಮೈಸೂರಿನಲ್ಲೂ ಸಹ ಭಾನುವಾರ ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ ಇದೇ ಆಗಸ್ಟ್ 27ರಂದು ರಾಜ ಭವನ ಚಲೋ ಕಾರ್ಯಕ್ರಮ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಗಿದೆ. ಕರ್ನಾಟಕ ಶೋಷಿತ ಸಮುದಾಯಗಳ ಮಾಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ವತಿಯಿಂದ ಇದೇ ಆಗಸ್ಟ್ 27ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಫ್ರೀಡಂ ಪಾರ್ಕ್‌ನಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಈ ಸಂಬಂಧ ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಕನಕ ಭವನದಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಸಲಾಗಿದೆ.