– ಅಧಿಕಾರಿಗಳಿಗೆ ಇಡಿ ನೋಟಿಸ್; ಲೋಕಾಯುಕ್ತದಿಂದಲೂ ತೀವ್ರ ವಿಚಾರಣೆ
ಬೆಂಗಳೂರು/ಮೈಸೂರು: ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಸಿ ರಾಜ್ಯಪಾಲರು ನೀಡಿರುವ ಆದೇಶ ಎತ್ತಿಹಿಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠದದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
Advertisement
ಏಕಸದಸ್ಯ ಪೀಠ ಆದೇಶ ನೀಡಿದ ಬರೋಬ್ಬರಿ 1 ತಿಂಗಳ ನಂತರ, ಸಾಕಷ್ಟು ಅಳೆದುತೂಗಿ ಸಿದ್ದರಾಮಯ್ಯ ಕಾನೂನಾತ್ಮಕವಾಗಿ ಮುಂದಡಿ ಇಟ್ಟಿದ್ದಾರೆ. ಈ ಅರ್ಜಿ ವಿಚಾರಣೆ ದಿನಾಂಕ ಇನ್ನಷ್ಟೇ ನಿಗದಿ ಆಗಬೇಕಿದೆ.
Advertisement
ಇದೇ ವೇಳೆ, ಮುಡಾ ಕೇಸ್ ತನಿಖೆ ಜೋರಾಗಿದೆ. ಇತ್ತೀಚೆಗಷ್ಟೇ ಮುಡಾ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದ ಇಡಿ ಈಗ ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ತಹಸೀಲ್ದಾರ್ ರಾಜಶೇಖರ್ ಸೇರಿ ನಾಲ್ವರು ಅಧಿಕಾರಿಗಳಿಗೆ ನೋಟಿಸ್ ಕೊಟ್ಟಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
Advertisement
ಇತ್ತ, ಲೋಕಾಯುಕ್ತ ತನಿಖೆಯೂ ಚುರುಕಾಗಿದೆ. 2004ರಲ್ಲಿ ಮೈಸೂರಿನ ಹೆಚ್ಚುವರಿ ಡಿಸಿ ಆಗಿದ್ದ ಪಾಲಯ್ಯರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. 2003ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಬಿ.ಎನ್.ಬಚ್ಚೇಗೌಡ ಹಾಗೂ ಅಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿದ್ದ ಸುಬ್ರಹ್ಮಣ್ಯರಾವ್‌ರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ.
Advertisement
ಕಳೆದ ವಾರ ಲೋಕಾಯುಕ್ತ ವಿಚಾರಣೆ ಎದುರಿಸಿದ್ದ ರಾಯಚೂರು ಸಂಸದ ಕುಮಾರನಾಯಕ್ ಮಾತನಾಡಿ, ಈ ವಿಚಾರದಲ್ಲಿ ಯಾವುದೇ ತಪ್ಪುಗಳಾಗಿಲ್ಲ ಎಂದಿದ್ದಾರೆ.