ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ (MUDA Scam Case) ಪ್ರಭಾವ ಬಳಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಆದೇಶ ಹೊರಡಿಸಿರುವುದು ಸಿಎಂ ಸಿದ್ದರಾಮಯ್ಯಗೆ (Siddaramaiah) ಸಂಕಷ್ಟ ತಂದಿಟ್ಟಿದೆ. ಕೋರ್ಟ್ ಆದೇಶ ಬೆನ್ನಲ್ಲೇ ಹೈಕಮಾಂಡ್‌ಗೆ ಸಿಎಂ ಸಿದ್ದರಾಮಯ್ಯ ವರದಿ ಕೊಟ್ಟಿದ್ದಾರೆ.
ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಮೂಲಕ ಕೋರ್ಟ್ ಆದೇಶದ ಬಗ್ಗೆ ಸಿಎಂ ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ. ಬುಧವಾರ ಕೇರಳದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿದ ಬಳಿಕ ತಮ್ಮ ಕೇಸ್ ಬಗ್ಗೆ ಸಂಪೂರ್ಣ ವಿವರಣೆ ಕೊಟ್ಟಿದ್ದಾರೆ. ಕೇಸ್ ಬಗ್ಗೆ ಮಾಹಿತಿ ಜೊತೆಗೆ ಹೈಕಮಾಂಡ್ ಸಹಕಾರ ಕೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಭ್ರಷ್ಟಾಚಾರ ಆರೋಪ ಇಲ್ಲದ ಒಬ್ಬನೇ ಒಬ್ಬ ಬಿಜೆಪಿ ನಾಯಕನನ್ನು ತೋರಿಸಿದರೆ ಸನ್ಮಾನ: ಸಿಎಂ
Advertisement
Advertisement
ಸಿಎಂರಿಂದ ಹೈಕಮಾಂಡ್‌ಗೆ ವರದಿ ಏನು?
ಹೈಕೋರ್ಟ್ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿದ್ದೇನೆ. ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇನೆ. ಮೇಲ್ಮನವಿಯಲ್ಲಿ ನ್ಯಾಯ ಸಿಗುವ ವಿಶ್ವಾಸ ಇದೆ. ಕೇಂದ್ರ ಸರ್ಕಾರ, ಬಿಜೆಪಿ-ಜೆಡಿಎಸ್ ಅವರು ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ.
Advertisement
ನಮ್ಮ ಸರ್ಕಾರವನ್ನ ಅಸ್ಥಿರಗೊಳಿಸಲು ರಾಜ್ಯಪಾಲರನ್ನ ಬಳಕೆ ಮಾಡಿಕೊಂಡಿದ್ದಾರೆ. ವಿಪಕ್ಷಗಳ ಸರ್ಕಾರ ಕೆಡವೋದು ಕೇಂದ್ರದ ಅಜೆಂಡಾ. ಇದನ್ನ ರಾಜ್ಯದಲ್ಲೂ ಮಾಡಲು ಮುಂದಾಗಿದ್ದಾರೆ. ಇದಕ್ಕೆ ಅವಕಾಶ ಕೊಡೋದು ಬೇಡ. ಮುಡಾ ಕೇಸ್‌ನಲ್ಲಿ ಪ್ರಾರಂಭದಲ್ಲಿ ಕೊಟ್ಟ ಬೆಂಬಲವನ್ನು ಈಗಲೂ ಕೊಡಿ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂಗೆ ಅಸಲಿ ಸಂಕಷ್ಟ – ಕೋರ್ಟ್ ಆದೇಶದಲ್ಲಿ ಏನಿದೆ? ಯಾರ ವಿರುದ್ಧ ತನಿಖೆ?
Advertisement
ಮುಡಾ ಕೇಸ್‌ನಲ್ಲಿ ನನ್ನದೇನು ತಪ್ಪಿಲ್ಲ. ಹೀಗಾಗಿ ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ. ತನಿಖೆ ಆಗಲಿ, ನಾನು ತನಿಖೆ ಎದುರಿಸುತ್ತೇನೆ. ನನಗೆ ಯಾವುದೇ ಭಯವಿಲ್ಲ. ರಾಜೀನಾಮೆ ಕೊಡದೇ ನಾನು ತನಿಖೆ ಎದುರಿಸುತ್ತೇನೆ. ನಿಮ್ಮ ಸಹಕಾರ ಬೇಕು ಎಂದು ಸಿಎಂ ಹೈಕಮಾಂಡ್ ಸಹಕಾರ ಕೇಳಿದ್ದಾರೆ.