Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾ ಸೈಟ್‌ ವಿವಾದ – 14 ನಿವೇಶನ ವಾಪಸ್‌ಗೆ ಮುಂದಾದ ಸಿಎಂ ಪತ್ನಿ; ಮುಡಾ ಆಯುಕ್ತರಿಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಡಾ ಸೈಟ್‌ ವಿವಾದ – 14 ನಿವೇಶನ ವಾಪಸ್‌ಗೆ ಮುಂದಾದ ಸಿಎಂ ಪತ್ನಿ; ಮುಡಾ ಆಯುಕ್ತರಿಗೆ ಪತ್ರ

Bengaluru City

ಮುಡಾ ಸೈಟ್‌ ವಿವಾದ – 14 ನಿವೇಶನ ವಾಪಸ್‌ಗೆ ಮುಂದಾದ ಸಿಎಂ ಪತ್ನಿ; ಮುಡಾ ಆಯುಕ್ತರಿಗೆ ಪತ್ರ

Public TV
Last updated: September 30, 2024 10:34 pm
Public TV
Share
3 Min Read
vlcsnap 2024 09 30 22h15m30s74
SHARE

– ನನಗೆ ನೀಡಿದ 14 ನಿವೇಶನಗಳನ್ನು ಹಿಂದಿರುಗಿಸಲು ಬಯಸುತ್ತೇನೆಂದು ಪತ್ರದಲ್ಲಿ ಉಲ್ಲೇಖ
– ಮುಡಾ ಕೇಸ್‌ ಬಗ್ಗೆ ಸಿಎಂ ಪತ್ನಿ ಮೊದಲ ಪ್ರತಿಕ್ರಿಯೆ

ಬೆಂಗಳೂರು/ಮೈಸೂರು: ಮುಡಾ ಹಗರಣ (MUDA Scam Case) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿ ಮುಂದಾಗಿದ್ದಾರೆ. ಈ ಸಂಬಂಧ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: MUDA Scam Case: ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ED

siddaramaiah muda scam

ಪತ್ರದಲ್ಲೇನಿದೆ?
ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು.

ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ.

Siddaramaiah Sri Chamundeshwari Development Authority Meeting 2

ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಇದನ್ನೂ ಓದಿ: MUDA Case: ಸಿಎಂಗೆ ಮತ್ತೊಂದು ಸಂಕಷ್ಟ – ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್‌ ಸಾಧ್ಯತೆ

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡಿದ್ದಾರೆ.

TAGGED:MUDA Scam CaseParvathi Siddaramaiahsiddaramaiahಪಾರ್ವತಿ ಸಿದ್ದರಾಮಯ್ಯಮುಡಾ ಹಗರಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
3 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
4 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
4 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
4 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
5 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?