ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA Scam Case) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ (ED) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಟೇಶ್ (Natesh) ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಇ.ಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದಾರೆ. ನಟೇಶ್ರನ್ನು ಬಂಧಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಮುಡಾ ಹಗರಣದಲ್ಲಿ ಮುಂದುವರಿದ ಇಡಿ ಬೇಟೆ – ಸಿಎಂ ಆಪ್ತ, ಬಿಲ್ಡರ್, ಮಾಜಿ ಆಯುಕ್ತರಿಗೂ ಶಾಕ್; ದಿನವಿಡೀ ಶೋಧ!
Advertisement
Advertisement
ಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳ ಅಕ್ರಮ ಹಂಚಿಕೆಯಾಗಲು ಪ್ರಾಧಿಕಾರದ ಹಿಂದಿನ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಕಾರಣ ಎಂದು ಆರೋಪಿಸಲಾಗಿತ್ತು.
Advertisement
ಈ ಹಿನ್ನೆಲೆಯಲ್ಲಿ ನಟೇಶ್ ಮನೆ ಮೇಲೆ ಸೋಮವಾರ ದಾಳಿ ಮಾಡಿ ಇ.ಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ, ತನಿಖೆಗೆ ನಟೇಶ್ ಅವರು ಸಹಕರಿಸಿಲ್ಲ ಎನ್ನಲಾಗಿದೆ. ನಾನು ಪ್ರಕರಣದಲ್ಲಿ ತಪ್ಪೆ ಮಾಡಿಲ್ಲ. ಸರ್ಕಾರದ ಆದೇಶ ಚಾಚು ತಪ್ಪದೇ ಪರಿಪಾಲನೆ ಮಾಡಿದ್ದೀನಿ. ಕಾರ್ತಿಕ್ ಲೇಔಟ್ ನಿರ್ಮಾಣ ಸಂದರ್ಭದಲ್ಲಿ ಆದ ಬೆಳವಣಿಗೆ ಗೊತ್ತಿಲ್ಲ. ಬಿಲ್ಡರ್ ಮಂಜುನಾಥ್ ಕಾನೂನಾತ್ಮಕವಾಗಿ ಲೇಔಟ್ ನಿರ್ಮಾಣ ಮಾಡಿದ್ದಾರೆ. 50:50 ಅನುಪಾತದಲ್ಲಿ ಯಾವುದೇ ಅವ್ಯವಹಾರವನ್ನೂ ಮಾಡಿಲ್ಲ. ಸರ್ಕಾರದ ನಡಾವಳಿಯಲ್ಲಿಯೇ ಇದೆ ಶೇ. 50:50 ಅನುಪಾತದಲ್ಲಿ ನೀಡಲಾಗಿದೆ. 2022 ಮತ್ತು 2023 ರಲ್ಲಿ ನಡಾವಳಿ ಬದಲಾವಣೆ ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ, ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಮನೆ ಮೇಲೂ ಇಡಿ ದಾಳಿ!
Advertisement
ಇಂದು ಬೆಳಗ್ಗೆ ಎಂಟು ಗಂಟೆಯಿಂದ ಮತ್ತೆ ದಾಳಿ ಮುಂದುವರಿಸಲಾಗಿತ್ತು. ನಾಲ್ಕು ಜನ ಇಡಿ ಅಧಿಕಾರಿಗಳಿಂದ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಯಿತು. ನಿನ್ನೆ ಮಾಜಿ ಆಯುಕ್ತ ನಟೇಶ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದರು. ನಟೇಶ್ ಮುಡಾ ಆಯುಕ್ತರಾಗಿದ್ದಾಗ ಸಿಎಂ ಪತ್ನಿಗೆ ಸೈಟ್ ಹಂಚಿಕೆಯಾಗಿತ್ತು.