– ಇತ್ತ ಬಿ-ರಿಪೋರ್ಟ್ ಪ್ರಶ್ನಿಸಿ ಇಡಿ ಅರ್ಜಿ
ಬೆಂಗಳೂರು: ಮುಡಾ ಹಗರಣದ (MUDA Scam) ಲೋಕಾಯುಕ್ತ (Lokayuktha) ಸಲ್ಲಿಸಿದ್ದ ಬಿ-ರಿಪೋರ್ಟ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ತೀರ್ಪು ನಾಳೆಗೆ ನಿಗದಿಯಾಗಿದೆ.
ಹೈಕೋರ್ಟ್ (High Court) ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ನಾಳೆ (ಸೆ.2) ಆದೇಶ ಕಾಯ್ದಿರಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಡಾ ಅಕ್ರಮ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ ಬಿ-ರಿಪೋರ್ಟ್ ಅಂಗೀಕರಿಸಿತ್ತು. ಆದರೆ ಬಿ-ರಿಪೋರ್ಟ್ ಅಂಗೀಕಾರ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಸದ್ಯದಲ್ಲೇ 4,744 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ – ಕೆಇಎ
ಈ ಮಧ್ಯೆ, ಮುಡಾ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮುಡಾ ಪ್ರಕರಣದ ಬಿ-ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಇಡಿ ತನಿಖೆಯಲ್ಲಿ ಬೆಳಕಿಗೆ ಬಂದ ಅಂಶಗಳನ್ನು ಪರಿಗಣಿಸಿಲ್ಲ. ಕಾನೂನು ಬಾಹಿರ ಡಿನೋಟಿಫಿಕೇಷನ್ ಬಗ್ಗೆ ತನಿಖೆ ಸಮರ್ಪಕವಾಗಿಲ್ಲ. ಭೂ ಪರಿವರ್ತನೆ ಕಾನೂನುಬಾಹಿರವೆಂಬುದನ್ನು ಪರಿಗಣಿಸಿಲ್ಲ ಎಂದು ಎಎಸ್‌ಜಿ ಅರವಿಂದ್ ಕಾಮತ್ ವಾದ ಮಂಡಿಸಿದ್ರು. ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
