Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮುಡಾ ಸೈಟು ವಿವಾದ | ಸಿಎಂ ಪತ್ನಿಯ 14 ಮುಡಾ ನಿವೇಶನಗಳ ಖಾತೆ ರದ್ದು

Public TV
Last updated: October 1, 2024 5:54 pm
Public TV
Share
3 Min Read
MUDA Site
SHARE

– ಸಿದ್ದರಾಮಯ್ಯರ ಪತ್ನಿ ಪತ್ರದ ಬೆನ್ನಲ್ಲೇ ಖಾತೆ ರದ್ದುಗೊಳಿಸಿದ ಮುಡಾ

ಮೈಸೂರು: ಮುಡಾ ಹಗರಣ (MUDA Scam Case) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ್ದ 14 14 ನಿವೇಶನಗಳ ಖಾತೆಯನ್ನು ಮುಡಾ ರದ್ದುಗೊಳಿಸಿದೆ.

ಕಳೆದ ಒಂದು ದಿನದ ಹಿಂದೆಯಷ್ಟೇ ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಿ ಅವರು ತಮ್ಮ ಜಮೀನಿಗೆ ಬದಲಿಯಾಗಿ ವಿಜಯನಗರದ 3 ಮತ್ತು 4ನೇ ಹಂತಗಳಲ್ಲಿ ವಿವಿಧ ಅಳತೆಯಲ್ಲಿ ನೀಡಲಾಗಿದ್ದ 14 ನಿವೇಶ ವಾಪಸ್‌ ಪಡೆಯುವಂತೆ ಪತ್ರದಲ್ಲಿ ಮುಡಾ ಆಯುಕ್ತರಿಗೆ ಮನವಿ ಮಾಡಿದ್ದರು. ಪತ್ರ ಬರೆದ ಮರುದಿನವೇ ಮುಡಾ 14 ನಿವೇಶನಗಳ ಖಾತೆಯನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ನಿವೇಶನ, ಆಸ್ತಿ, ಸಂಪತ್ತು ನನ್ನ ಪತಿ ಘನತೆ, ಮರ್ಯಾದೆಗಿಂತ ದೊಡ್ಡದಲ್ಲ: ಸಿಎಂ ಪತ್ನಿ

vlcsnap 2024 09 30 22h15m30s74

ಸಿಎಂ ಪತ್ನಿ ಬರೆದ ಪತ್ರದಲ್ಲೇನಿತ್ತು?
ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು.

parvathi siddaramaiah siddaramaiah

ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ಇದನ್ನೂ ಓದಿ: ತನಿಖೆ ನಿಲ್ಲಲ್ಲ, ಶಿಕ್ಷೆ ಪ್ರಮಾಣ ಕಡಿಮೆ ಆಗಬಹುದು; ಭಾವನಾತ್ಮಕ ಪತ್ರ ಕೊನೆಯ ಅಸ್ತ್ರ ಅಷ್ಟೆ – ಸ್ನೇಹಮಯಿ ಕೃಷ್ಣ

ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಇದನ್ನೂ ಓದಿ: MUDA Scam| ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಮುಡಾ ಸೈಟ್‌ ವಾಪಸ್‌ಗೆ ಸಿಎಂ ಪತ್ನಿ ನಿರ್ಧಾರ – ಕಾನೂನು ಹೋರಾಟದ ಪರಿಣಾಮ ಏನು?

TAGGED:MUDA Scam CaseParvathi Siddaramaiahsiddaramaiahಪಾರ್ವತಿ ಸಿದ್ದರಾಮಯ್ಯಮುಡಾ ಹಗರಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

t nasir nia bengaluru blast
Bengaluru City

ಫಿಲ್ಮ್‌ ಸ್ಟೈಲ್‌ ಬಾಂಬ್‌ ಸ್ಫೋಟಿಸಿ ಜೈಲಿನಲ್ಲಿರುವ ಉಗ್ರ ನಾಸೀರ್‌ ಬಿಡುಗಡೆ ಪ್ಲ್ಯಾನ್‌ – ಶಾಕಿಂಗ್‌ ಸಂಚು ಬಯಲು

Public TV
By Public TV
7 minutes ago
Mantralaya
Districts

ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ – ಅದ್ದೂರಿಯಾಗಿ ನಡೆದ ಮೃತ್ತಿಕಾ ಸಂಗ್ರಹ ಮಹೋತ್ಸವ

Public TV
By Public TV
33 minutes ago
G.Parameshwar
Bengaluru City

ಸಿಎಂ ಬದಲಾವಣೆ – ನನಗೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟವಿಲ್ಲ ಎಂದ ಪರಮೇಶ್ವರ್

Public TV
By Public TV
58 minutes ago
Kunigal MLA
Districts

ಅಪಘಾತದಲ್ಲಿ ಮೂಳೆ ಮುರಿತ – ವ್ಯಕ್ತಿಯ ಆಪರೇಷನ್ ಮಾಡಿದ ಶಾಸಕ ರಂಗನಾಥ್

Public TV
By Public TV
1 hour ago
Siddaramaiah 3 2
Karnataka

ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ

Public TV
By Public TV
1 hour ago
elephant attack on farmer in kanakapura
Districts

ಕಾಡಾನೆ ದಾಳಿಯಿಂದ ರೈತನ ಕಾಲು ಮುರಿತ – ನಡುರಸ್ತೆಯಲ್ಲೇ ಮಲಗಿಸಿ ಪ್ರತಿಭಟಿಸಿದ ಗ್ರಾಮಸ್ಥರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?