MUDA Scam | ಬ್ಲ್ಯಾಕ್‌ಮೇಲ್‌ ಆರೋಪ – ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌

Public TV
2 Min Read
Snehamayi Krishna

ಮೈಸೂರು: ಮುಡಾ ಪ್ರಕರಣಕ್ಕೆ (MUDA Case) ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ (FIR) ದಾಖಲಾಗಿದೆ.

Snehamayi Krishna

ಸಿಎಂ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡದ ನಿವೇಶನ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನು ಖಂಡಿಸಿದ ಲಕ್ಷ್ಮಣ್‌ (M Lakshman) ಅವರು ಸ್ನೇಹಮಯಿ ಕೃಷ್ಣ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ. ಸಿಎಂ ವಿರುದ್ಧ ಪ್ರತಿ ನಿತ್ಯ ಒಂದಲ್ಲೊಂದು ಆರೋಪ ಮಾಡಿ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಲಕ್ಷ್ಮಣ್‌ ದೂರು ನೀಡಿದ್ದರು. ದೂರು ನೀಡಿದ ಮರುದಿನವೇ ದೇವರಾಜ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಮುಡಾದಲ್ಲಿ ಸಿಎಂ ಪ್ರಭಾವಕ್ಕೆ ಮತ್ತೊಂದು ಸಾಕ್ಷಿ – ಸಿಎಂ ಪತ್ನಿ ಕ್ರಯಪತ್ರದ ಮುದ್ರಾಂಕ ಶುಲ್ಕ ತಹಶೀಲ್ದಾರ್‌ರಿಂದಲೇ ಪಾವತಿ

ತಹಶೀಲ್ದಾರ್‌ರಿಂದ ಮುದ್ರಾಂಕ ಶುಲ್ಕದ ಪಾವತಿ ಆರೋಪ:
ಮುಡಾದಲ್ಲಿ ಸಿದ್ದರಾಮಯ್ಯ (Siddaramaiah)) ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಸಾಕ್ಷಿ ಬಹಿರಂಗಪಡಿಸಿದ್ದರು. ಸಿಎಂ ಪತ್ನಿ ಪಾರ್ವತಿ ಅವರ ಕ್ರಯಪತ್ರದ ಮುದ್ರಾಂಕದ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿಸಿದ್ದಾರೆಂದು ಇದೇ ನವೆಂಬರ್‌ 10ರಂದು ಆರೋಪ ಮಾಡಿದ್ದರು. ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ವೊಂದನ್ನೂ ಹಂಚಿಕೊಂಡಿದ್ದರು. ಇದನ್ನೂ ಓದಿ: Valmiki Scam | ಸಿಬಿಐ ತನಿಖೆ ಕೋರಿ ಯೂನಿಯನ್‌ ಬ್ಯಾಂಕ್‌ ಸಲ್ಲಿಸಿದ್ದ ಅರ್ಜಿ ವಜಾ

ಸಿಎಂ ಪತ್ನಿ ಪಾರ್ವತಿ ಅವರ ಕ್ರಯಪತ್ರದ ಮುದ್ರಾಂಕ ಶುಲ್ಕವನ್ನು ತಹಶೀಲ್ದಾರರು ಪಾವತಿ ಮಾಡಿದ್ದಾರೆ ಎಂದು ದೂರಿದ್ದಾರೆ. ಅದೇ ರೀತಿ ಮತ್ತೊಂದು ಕ್ರಯಪತ್ರದ ಉದಾಹರಣೆ ನೀಡಿ ದೂರುದಾರ ಆರೋಪಿಸಿದ್ದಾರೆ. ಆ ಕ್ರಯ ಪತ್ರದಲ್ಲಿ ನೋಂದಣಿ ಮಾಡಿಸಿಕೊಂಡ ವ್ಯಕ್ತಿಯಿಂದ ಹಣ ಪಾವತಿಯಾಗಿದೆ ಎಂದಿದ್ದಾರೆ. ಸಿಎಂ ಪತ್ನಿ ವಿಚಾರದಲ್ಲಿ ಮುಡಾ ವಿಶೇಷ ತಹಶೀಲ್ದಾರ್‌ರಿಂದ ಹಣ ಪಾವತಿಯಾಗಿದೆ. ನನ್ನ ಆರೋಪಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಸ್ನೇಹಮಯಿ ಕೃಷ್ಣ ಬರೆದುಕೊಂಡಿದ್ದರು. ಇದನ್ನೂ ಓದಿ: PUBLiC TV Impact | ಕೃಷ್ಣಾ ನದಿಗೆ ಭೇಟಿ ನೀಡಿದ ಮಾಲಿನ್ಯ ನಿಯಂತ್ರಣ ಮಂಡಳಿ

Share This Article