Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌!

Public TV
1 Min Read
MUDA G T Dinesh Kumar

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಪ್ರಕರಣದಲ್ಲಿ (MUDA Scam Case) ಮೊದಲ ವಿಕೆಟ್‌ ಪತನವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಸಮಾನತುಗೊಳಿಸಿ ಸರ್ಕಾರ (Government Of Karnataka )ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

Suspension order page 0001 scaled

ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: MUDA Scam | ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್ –‌ ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!

Suspension order page 0002 scaled

ಸರ್ಕಾರದ ಆದೇಶದಲ್ಲಿ ಏನಿದೆ?
KUDA ಕಾಯ್ದೆ ಕಲಂ 13 (1) ರಲ್ಲಿ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ ಇರುವುದು ಮತ್ತು ಸರ್ಕಾರದಿಂದ ನೀಡಲಾದ ನಿರ್ದೇಶನಗಳ ಪಾಲನೆಯಾಗುತ್ತಿಲ್ಲದಿರುವುದನ್ನು ಗಮನಿಸಲಾಗಿದೆ. ಇದನ್ನೂ ಓದಿ: ಟಿಕೆಟ್ ಸಿಗಲಿ, ಸಿಗದೇ ಇರಲಿ ಪಕ್ಷದ ಜೊತೆ ಇರ್ತೇನೆ, ಜೆಡಿಎಸ್‌ಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇನೆ: ಸಿಪಿವೈ

Suspension order page 0003 scaled

ಸರ್ಕಾರವು ನೀಡುವ ಯಾವುದೇ ನಿರ್ದೇಶನಗಳನ್ನು ಪಾಲಿಸುವುದು KUDA ಕಾಯ್ದೆ ಕಲಂ 65ರನ್ವಯ ಪ್ರಾಧಿಕಾರದ ಜವಾಬ್ದಾರಿ. ಆದ್ರೆ ನಿಯಮಗಳಿಗೆ ಮತ್ತು ಸರ್ಕಾರದ ನಿರ್ದೇಶನಗಳಿಗೆ ವ್ಯತಿರಿಕ್ತವಾಗಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸುತ್ತಿರುವುದು ಮತ್ತು ಅದರಂತೆ ಕ್ರಮವಹಿಸುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: Shivamogga | ಪ್ರೀತಿಸಲು ಹುಡುಗಿ ಸಿಗಲಿಲ್ಲ ಅಂತ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ!

Suspension order page 0004 scaled

ಅಲ್ಲದೇ ದಿನೇಶ್‌ ಕುಮಾರ್‌ ಅವರ ವಿರುದ್ಧ ಇನ್ನೂ ಅನೇಕ ಆರೋಪಗಳಿಂದ ಕರ್ತವ್ಯ ಲೋಪ ಎಸಗಿರುವುದು ಸಕ್ಷಮ ಪ್ರಾಧಿಕಾರಕ್ಕೆ ಮನವರಿಕೆಯಾಗಿದೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋ ಶೂಟ್‌ಗೆ ದೀಪಿಕಾ-ರಣವೀರ್‌ ಪೋಸ್‌; ಬಾಲಿವುಡ್‌ನ ಕ್ಯೂಟ್‌ ಕಪಲ್‌ ಫುಲ್‌ ಶೈನ್‌

Suspension order page 0005 scaled

ಸದರಿ ಅವರು ಅಧಿಕಾರದಲ್ಲಿ ಮುಂದುವರಿದಲ್ಲಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.

Share This Article