ಬೆಂಗಳೂರು: ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ (CM Siddaramaiah )ಶೋಭೆಯಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D KumAraswamy) ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವೈಟ್ನರ್ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಮೇತ ಸ್ಪಷ್ಟೀಕರಣ ನೀಡಿದ್ದಕ್ಕೆ ಟಾಂಗ್ ಕೊಟ್ಟಿದ್ದಾರೆ. ಟ್ವೀಟ್‌ನಲ್ಲಿ ಸಿಎಂ ವಿರುದ್ದ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ನೀವು ತೋರಿಸುತ್ತಿರುವುದ ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: MUDA Scam | ವೈಟ್ನರ್ ಹಿಂದಿರುವ ಅಕ್ಷರಗಳೇನು? – ವೀಡಿಯೋ ಸಮೇತ ಸಾಕ್ಷಿ ನೀಡಿದ ಸಿದ್ದರಾಮಯ್ಯ
Advertisement
ಮಾನ್ಯ @siddaramaiah ನವರೇ..
•ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ.
•ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು?
•ನಿಮಗೆ ಈ ಮೂಲ ದಾಖಲೆ ತಂದು ಕೊಟ್ಟ ಮಹಾಶಯರು ಯಾರು?
•ಇಷ್ಟಕ್ಕೂ ಈ ಮೂಲ ದಾಖಲೆ… pic.twitter.com/ksitsvDP2G
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 26, 2024
Advertisement
ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ? ಅಥವಾ ಇನ್ನಾರಾದರೂ ಇದ್ದಾರಾ? ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ ಹೇಗೆ? ಎಂದು ಕುಟುಕಿದ್ದಾರೆ.
Advertisement
Advertisement
ಸಿದ್ದರಾಮಯ್ಯನವರೇ ಶಿಶುಪಾಲನ ಹಾಗೆ ನೀವು ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ ಎಂದು ಎಚ್ಚರಿಸಿದ್ದಾರೆ.
ವೈಟ್ನರ್ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಮೇತ ಸ್ಪಷ್ಟೀಕರಣ ನೀಡಿದ್ದರು. ವೈಟ್ನರ್ ಹಾಕಿರುವ ಸಾಲಿಗೆ ಲೈಟ್ ಬಿಟ್ಟು ವಿಡಿಯೋ ಮಾಡಲಾಗಿದ್ದು, ಅದರಲ್ಲಿನ ಸಾಲುಗಳು ಏನಿತ್ತು ಎಂಬುದನ್ನ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದು ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದರು. ಇದನ್ನೂ ಓದಿ: ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ತಿಳಿಸಿ; ಇಲ್ಲವಾದ್ರೆ ಇದು ಹಿಟ್&ರನ್ ಆಗುತ್ತೆ: ಆರ್.ಅಶೋಕ್