ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೇಸಲ್ಲಿ (MUDA Case) ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಸೋಮವಾರ ಹೈಕೋರ್ಟ್‌ನಲ್ಲಿ (Karnataka High Court) ನಡೆಯಲಿದೆ.
ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ, ಸೆಪ್ಟೆಂಬರ್ 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ. ಅಂದು ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಇದನ್ನೂ ಓದಿ: MUDA Scam | ವೈಟ್ನರ್ ಹಿಂದಿರುವ ಅಕ್ಷರಗಳೇನು? – ವೀಡಿಯೋ ಸಮೇತ ಸಾಕ್ಷಿ ನೀಡಿದ ಸಿದ್ದರಾಮಯ್ಯ
ಹೀಗಾಗಿ ಸೋಮವಾರ ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಕಡಿಮೆ ಇದೆ. ಈ ಮಧ್ಯೆ, ಮುಡಾ ಟೆನ್ಶನ್‌ನಲ್ಲಿಯೋ ಏನೋ ಸಚಿವ ಬೈರತಿ ಸುರೇಶ್ ಟೆಂಪಲ್ ರನ್ ಮಾಡಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಮತ್ತು ನಂಜನಗೂಡಿನ ಶ್ರೀಕಂಠೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: MUDA Scam | ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ – ಕೋವಿಡ್ ಹಗರಣ ವರದಿಗೆ ಉತ್ತರ ಕೊಡ್ತೇವೆ: ಬೊಮ್ಮಾಯಿ
ಈ ಮಧ್ಯೆ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಇಲ್ಲ. ಹೀಗಾಗಿ ಕೋರ್ಟ್ನಲ್ಲಿ ಅವರಿಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವನ್ನು ಸಚಿವ ಎಂಬಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: MUDA Scam Case | ಸಿಎಂ ಪತ್ನಿ ವಿರುದ್ಧ ದೂರು ದಾಖಲು
ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಇದೇ ಸೆಪ್ಟೆಂಬರ್ 2ರಂದು ವಿಚಾರಣೆ ನಡೆಸಿದ್ದ ಕೋರ್ಟ್ 2ನೇ ಬಾರಿಗೆ ಮುಂದೂಡಿಕೆ ಮಾಡಿತ್ತು. ಗಣೇಶ ಹಬ್ಬದ ಬಳಿಕ ಸೆಪ್ಟೆಂಬರ್ 9 ರಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ (Karnataka High Court) ವಿಚಾರಣೆ ನಡೆಸುವುದಾಗಿ ತಿಳಿಸಿತ್ತು. ಇದನ್ನೂ ಓದಿ: MUDA Scam | ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್ – ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!