ಬೆಂಗಳೂರು: ಮುಡಾ ಹಗರಣ (MUDA Scam) ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದಿನಿಂದ ಕಾನೂನು ಸಮರ (Legal Battle) ಆರಂಭವಾಗಲಿದೆ.
ರಾಜ್ಯಪಾಲರ ಆದೇಶದ ವಿರುದ್ಧ ಇಂದು ಹೈಕೋರ್ಟ್‌ನಲ್ಲಿ (High Court) ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಮತ್ತು ಕಪಿಲ್ ಸಿಬಲ್ ಟೀಂ ವಾದ ಮಾಡಲಿದೆ.
ಸಿಎಂ ಪರ ವಾದ ಏನಿರಬಹುದು?
ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ನಡೆ ರಾಜಕೀಯ ಪ್ರೇರಿತವಾಗಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ನಡೆದಿಲ್ಲ.
ಅಧಿಕಾರ ದುರ್ಬಳಕೆ, ಭ್ರಷ್ಟಾಚಾರ ನಡೆದಿಲ್ಲ. ಮುಡಾ (MUDA) ನಿಯಮದ ಅನ್ವಯವೇ ನಿವೇಶನ ಹಂಚಿಕೆಯಾಗಿದೆ. ಇದರಲ್ಲಿ ನನ್ನ ಮತ್ತು ನನ್ನ ಕುಟುಂಬ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಇದನ್ನೂ ಓದಿ: ಊಟದ ವೇಳೆ ಇಲಿ ಪಾಷಾಣ ಸ್ಪ್ರೇ – 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಯಾವುದೇ ದಾಖಲಾತಿಗಳಿಲ್ಲದೆ ಏಕಪಕ್ಷೀಯವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಯನ್ನು ರದ್ದು ಮಾಡಬೇಕು.
ರಾಜ್ಯಾಪಾಲರ ಆದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನ ಕಾಯ್ದೆಯ ಸೆಕ್ಷನ್ 17ಎ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಸೆಕ್ಷನ್ ಅಡಿ ಡಿಜಿ-ಐಜಿಪಿ ಮಟ್ಟದ ಪೊಲೀಸ್ ಅಧಿಕಾರಿ ಪ್ರಾಸಿಕ್ಯೂಷನ್‌ಗೆ ಕೇಳಬೇಕು. ಕೇಂದ್ರ ಸರ್ಕಾರವೇ 2021ರ ಸೆಪ್ಟೆಂಬರ್‌ನಲ್ಲಿ ಈ ನಿಯಮಾವಳಿ ರೂಪಿಸಿದೆ. ಇದನ್ನೂ ಓದಿ: ಅಂದು ಯಡಿಯೂರಪ್ಪ, ಇಂದು ಸಿದ್ದರಾಮಯ್ಯ – ಸಿಎಂಗೆ ಕಂಟಕವಾದ `ಮೈತ್ರಿ’ ಪಾದಯಾತ್ರೆ
ಪ್ರಾಸಿಕ್ಯೂಷನ್‌ಗೆ ಅನುಮತಿಸಲು ಯಾವುದಾದರೂ ತನಿಖಾ ವರದಿ ಇರಬೇಕು. ಸಿದ್ದರಾಮಯ್ಯ ವಿರುದ್ಧ ಯಾವುದೇ ತನಿಖಾ ವರದಿ ಇರಲಿಲ್ಲ. ಯಾವುದೇ ಸೂಕ್ತ ಆಧಾರವಿಲ್ಲದೇ ತನಿಖೆಗೆ ಒಪ್ಪಿಗೆ ನೀಡಲಾಗಿದೆ. ಖಾಸಗಿ ದೂರಿನ ಮೇಲೆ ತನಿಖೆಗೆ ನೀಡಿರುವುದು ಕಾನೂನು ಬಾಹಿರ. ಈ ಮೂಲಕ ರಾಜ್ಯಪಾಲರೇ ತನಿಖಾಧಿಕಾರಿಯಂತೆ ವರ್ತಿಸಿದ್ದಾರೆ.
ಕಾನೂನಾತ್ಮಕವಾಗಿಯೇ ಬದಲಿ ನಿವೇಶನ ಹಂಚಿಕೆಯಾಗಿದೆ. ನಿರ್ದಿಷ್ಟ ಸ್ಥಳದಲ್ಲೇ ಬದಲಿ ನಿವೇಶನ ಕೊಡಿ ಎಂದು ಸಿಎಂ ಕುಟುಂಬ ಕೇಳಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಡಿನೋಟಿಫೈ, ಜಮೀನು ನೋಂದಣಿ ಸಂಬಂಧ ಯಾರ ಮೇಲೂ ಪ್ರಭಾವ ಬೀರಿಲ್ಲ.