ಮೈಸೂರು: ಮುಡಾ ಹಗರಣ (MUDA Scam) ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ (K.V.Rajendra) ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ (Mysuru DC) ಲಕ್ಷ್ಮಿಕಾಂತ ರೆಡ್ಡಿ ಅವರನ್ನು ನಿಯೋಜಿಸಲಾಗಿದೆ. ರೆಡ್ಡಿ ಅವರು ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಈಗ ಮೈಸೂರು ಡಿಸಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಇದನ್ನೂ ಓದಿ: MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್
ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಧಿಕಾರಿ ವರ್ಗಾವಣೆಯಾಗಿರುವುದು ಚರ್ಚೆ ಹುಟ್ಟುಹಾಕಿದೆ. ರಾಜೇಂದ್ರ ಅವರು 2022ರ ಅ.27 ರಂದು ಡಿಸಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಎರಡು ವರ್ಷಕ್ಕೂ ಮುನ್ನವೇ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮುಡಾಕ್ಕೆ ಅಧ್ಯಕ್ಷರನ್ನು ನೇಮಿಸುವವರೆಗೂ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ನಿವೇಶನ ಹಂಚಿಕೆ ವಿವಾದ- ಮುಡಾ ಆಯುಕ್ತರಿಗೆ 15 ಪತ್ರ ಬರೆದಿದ್ದ ಮೈಸೂರು ಡಿಸಿ