ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯವಾಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ನಾನು ಶುದ್ಧಹಸ್ತ ಎಂದು ಪದೇಪದೆ ಹೇಳುವ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿಲಿ ಎಂದರು. ಇದನ್ನೂ ಓದಿ: TB Dam | ಮೂರನೇ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ – ಎಲ್ಲಾ ಗೇಟ್ ಬಂದ್
ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್-ಬಿಜೆಪಿ ಜಂಟಿಯಾಗಿ ಆ.3ರಂದು ಬೆಂಗಳೂರಿನ ಕೆಂಗೇರಿಯಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದನ್ನು ಸ್ಮರಿಸಬಹುದು. ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಈ ಕ್ರಮ ಸಾಬೀತುಪಡಿಸಿದೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂಬ ಗಾದೆ ಮಾತು ಈಗ ಅಕ್ಷರಶಃ ಸತ್ಯವಾಗಿದೆ. ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ ಎಂದಿದ್ದಾರೆ. ಇದನ್ನೂ ಓದಿ: ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ ಮಾತನಾಡೋ ಸಿಎಂ ರಾಜೀನಾಮೆ ನೀಡಲಿ: ಜನಾರ್ದನ ರೆಡ್ಡಿ
ಸದ್ಯ ಸಂಕಷ್ಟದಲ್ಲಿರುವ ಮಾನ್ಯ ಮುಖ್ಯಮಂತ್ರಿಗಳಿಗೆ ಬೇರೆ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸ್ವಲ್ಪವಾದರೂ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ಕೊಡಿ: ಸಿಎಂಗೆ ಡಾ.ಅಶ್ವತ್ಥ್ ನಾರಾಯಣ್ ಸವಾಲ್