– ಮಾಜಿ ಮುಡಾ ಅಧಿಕಾರಿಗಳ ಸ್ಫೋಟಕ ಹೇಳಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಂಚಿಕೆ ಹಗರಣ (MUDA Scam) ಈಗ ಇಬ್ಬರು ಸಚಿವರಿಗೂ ಸುತ್ತಿಕೊಳ್ಳುವ ಸಾಧ್ಯತೆಯಿದೆ.
ಹೌದು. ಸಿಎಂ ವಿರುದ್ಧದ ಜಾರಿ ನಿರ್ದೇಶನಾಲಯದ (ED) ತನಿಖೆ ತೀವ್ರಗೊಳ್ಳುತ್ತಿದ್ದಂತೆ ಅಧಿಕಾರಿಗಳು ಈಗ ಇಬ್ಬರು ಸಚಿವರ ಹೆಸರನ್ನು ಹೇಳಿರುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಸಿಕ್ಕಿದೆ.
ಇಡಿ ಮುಡಾದಲ್ಲಿ ಹಿಂದೆ ಕೆಲಸ ಮಾಡಿದ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದೆ. ಈ ವೇಳೆ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡುವಾಗ ಇಬ್ಬರು ಸಚಿವರು ಪ್ರಭಾವ ಬೀರಿದ್ದಾರೆ. ಪ್ರಮುಖ ಸಚಿವರಿಂದಲೇ ಅಕ್ರಮ ನಡೆದಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬೀದರ್ ಬರೋಬ್ಬರಿ 13,295 ಎಕರೆ ಆಸ್ತಿ ವಕ್ಫ್ ಪಾಲು!
ಮುಡಾ ಮಾಜಿ ಅಧಿಕಾರಿಗಳ ಹೇಳಿಕೆಯನ್ನು ಬೆನ್ನತ್ತಿರುವ ಇಡಿ ಈಗ ದಾಖಲೆ ಪರಿಶೀಲನೆಯನ್ನು ತೀವ್ರಗೊಳಿಸಿದೆ. ಒಂದು ವೇಳೆ ಅಧಿಕಾರಿಗಳ ಹೇಳಿಕೆಗೆ ಸಂಬಂಧಿಸಿದಂತೆ ಪೂರಕ ದಾಖಲೆಗಳು ಸಿಕ್ಕಿದರೆ ಇಡಿ ಇಬ್ಬರು ಸಚಿವರನ್ನು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ. ಇದನ್ನೂ ಓದಿ: ಮುಡಾದಲ್ಲಿ ಭಾರೀ ಅಕ್ರಮ – ಹಂಚಿಕೆಯಾದ 2 ಸಾವಿರ ಸೈಟ್‌ಗಳಿಗೆ ಮೂಲ ದಾಖಲೆ ಇಲ್ಲ
ಮುಡಾ ವಿಚಾರಣೆ ತೀವ್ರಗೊಳ್ಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿರುವ ಕಾನೂನು ತಂಡದ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡುತ್ತಿದ್ದಾರೆ.