ನವದೆಹಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧದ ಪ್ರಾಸಿಕ್ಯೂಷನ್ ಸಮರದಲ್ಲಿ ರಾಹುಲ್ ಗಾಂಧಿ (Rahul Gandhi) ಸೈಲೆಂಟ್ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಮುಡಾ (MUDA Scam) ವಿಚಾರವನ್ನು ದೊಡ್ಡದು ಮಾಡಲು ಬಿಜೆಪಿ (BJP) ಕಾಯುತ್ತಿದೆ. ನಾವು ಈಗ ಪ್ರತಿಕ್ರಿಯೆ ನೀಡಿದರೆ ಅದನ್ನೇ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಾರೆ. ಕರ್ನಾಟಕದ (Karnataka) ವಿಚಾರ ರಾಜ್ಯದಲ್ಲಿಯೇ ಹೋರಾಟ ಮಾಡಿ ರಾಜಕೀಯವಾಗಿ ಎದುರಿಸಿ ಎಂದು ಸಿಎಂಗೆ ಸಲಹೆ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಮುಡಾ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನೀವು ಕಾನೂನು ಹೋರಾಟ ಮುಂದುವರಿಸಿ. ನಿಮ್ಮ ಜೊತೆಗೆ ನಾವಿದ್ದೇವೆ. ಹರ್ಯಾಣ, ಜಮ್ಮು ಚುನಾವಣೆ ಘೋಷಣೆಯಾಗಿದ್ದು ಬಿಜೆಪಿಯ ರಾಜಕೀಯ ದಾಳಿಗೆ ಬಗ್ಗುವುದು ಬೇಡ ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ – 2,144 ಪುಟಗಳ ದೋಷಾರೋಪ ಪಟ್ಟಿಯಲ್ಲೇನಿದೆ?
ಹರ್ಯಾಣ, ಜಮ್ಮು ಕಾಶ್ಮೀರ ಚುನಾವಣೆಯ ನಂತರ ಮಹಾರಾಷ್ಟ್ರದಲ್ಲೂ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಬಿಜೆಪಿ ಅದನ್ನು ಅಸ್ತ್ರವನ್ನಾಗಿ ಮಾಡುವ ಸಾಧ್ಯತೆ ಇರುವುದರಿಂದ ರಾಹುಲ್ ಗಾಂಧಿ ಎಚ್ಚರಿಕೆ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.