ಕೋಲ್ಕತ್ತಾ: ನೀವು ಸಿದ್ದರಾಮಯ್ಯನವರ (CM Siddaramaiah) ರಾಜೀನಾಮೆ ಕೇಳುತ್ತೀರಾ ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಕುನಾಲ್ ಘೋಷ್ (Kunal Ghosh) ಅವರು ರಾಹುಲ್ ಗಾಂಧಿ (Rahul Gandhi) ಅವರಿಗೆ ಪ್ರಶ್ನೆ ಕೇಳಿದ್ದಾರೆ.
ಕೋಲ್ಕತ್ತಾದಲ್ಲಿ ಟ್ರೈನಿ ಡಾಕ್ಟರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ರಾಹುಲ್ ವಿರುದ್ಧ ಎಕ್ಸ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಕುನಾಲ್ ಘೋಷ್, ರಾಹುಲ್ ಗಾಂಧಿ ಅವರೇ ನಿಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡುವಂತೆ ಹೇಳುತ್ತೀರಾ? ಅವರ ವಿರುದ್ಧ ದೊಡ್ಡ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಸರಿಯಾದ ಮಾಹಿತಿ ಇಲ್ಲದೇ, ಮಮತಾ ಬ್ಯಾನರ್ಜಿ ತೆಗೆದುಕೊಂಡ ಕ್ರಮಗಳನ್ನು ತಿಳಿಯದೇ ನೀವು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡಿದ್ದೀರಿ. ಈಗ ನೀವು ನಿಮ್ಮ ಸಿಎಂ ಬಗ್ಗೆ ದಯವಿಟ್ಟು ಕ್ರಮ ಕೈಗೊಳ್ಳುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಏನಾದರೂ ಗಲಾಟೆಯಾದರೆ ಅದಕ್ಕೆ ರಾಜ್ಯಪಾಲರೇ ಹೊಣೆ – ಜಮೀರ್ ಅಹ್ಮದ್ ಎಚ್ಚರಿಕೆ
ರಾಹುಲ್ ಹೇಳಿದ್ದೇನು?
ವೈದ್ಯಕೀಯ ಕಾಲೇಜಿನಂತಹ ಸ್ಥಳದಲ್ಲಿ ವೈದ್ಯರು ಸುರಕ್ಷಿತವಾಗಿಲ್ಲದಿದ್ದರೆ, ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಓದಲು ಹೇಗೆ ಹೊರಗೆ ಕಳುಹಿಸುತ್ತಾರೆ? ನಿರ್ಭಯಾ ಪ್ರಕರಣದ ನಂತರ ಮಾಡಿದ ಕಟ್ಟುನಿಟ್ಟಿನ ಕಾನೂನುಗಳು ಇಂತಹ ಅಪರಾಧಗಳನ್ನು ತಡೆಗಟ್ಟುವಲ್ಲಿ ವಿಫಲವಾದವು ಏಕೆ? ಹತ್ರಾಸ್‌ನಿಂದ ಉನ್ನಾವ್‌ವರೆಗೆ ಮತ್ತು ಕಥುವಾದಿಂದ ಕೋಲ್ಕತ್ತಾದವರೆಗೆ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ವಿರುದ್ಧದ ಘಟನೆಗಳ ಕುರಿತು ಪ್ರತಿ ಪಕ್ಷ, ಸಮಾಜದ ಪ್ರತಿಯೊಂದು ವರ್ಗವು ಗಂಭೀರ ಚರ್ಚೆಗಳನ್ನು ನಡೆಸಬೇಕು ಮತ್ತು ಕಠಿಣವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದರು. ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಸಾಹಿತಿಗಳು – ಪ್ರತಿಭಟನೆಗೆ ಕರೆ
ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ಸಂತ್ರಸ್ತೆಗೆ ನ್ಯಾಯ ಒದಗಿಸುವ ಬದಲು ಆರೋಪಿಯನ್ನು ರಕ್ಷಿಸಲು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತ ಮುಂದಾಗಿದೆ ಎಂದು ಮಮತಾ ಬ್ಯಾನರ್ಜಿ ವಿರುದ್ಧವೇ ರಾಹುಲ್ ಕಿಡಿಕಾರಿದ್ದರು.