ಮುಡಾ ಸೈಟ್ ಹಗರಣ ಕೇಸ್; ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರಿಂದ ನೋಟಿಸ್

Public TV
1 Min Read
Siddaramaiah 2

ಬೆಂಗಳೂರು: ಮುಡಾ ಅಕ್ರಮ ಸೈಟು (MUDA Site Allotment Scam) ಆರೋಪ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ (Siddaramaiah) ರಾಜ್ಯಪಾಲರು ನೋಟಿಸ್ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದನ್ನೇ ಆಧರಿಸಿ ವಿವರಣೆ ಕೋರಿ ಇದೀಗ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ; ಸಂಸತ್‌ನಲ್ಲಿ ಧ್ವನಿ ಎತ್ತಿದ ಕಾಗೇರಿ

Thawar Chand Gehlot

ಹೀಗಾಗಿಯೇ ರಾಜಭವನದ ಮೇಲೆ ಸಚಿವರು ಸಂಶಯ ವ್ಯಕ್ತಪಡಿಸಿದ್ದಾರೆ. ಇ.ಡಿ ಜೊತೆಗೆ ರಾಜಭವನದ ದುರುಪಯೋಗ ಆಗ್ತಿದೆ ಅಂತಾ ಆರೋಪಿಸಿ ಗರಂ ಆಗಿದ್ದಾರೆ. ಈ ನಡುವೆ ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುವುದರ ವಿರುದ್ಧ ನಾಳೆ ಕ್ಯಾಬಿನೆಟ್‌ನಲ್ಲಿ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಕ್ಯಾಬಿನೆಟ್ ನಿರ್ಣಯದ ವೇಳೆ ಸಿಎಂ ಸಿದ್ದರಾಮಯ್ಯ ಸಭೆಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಇದೀಗ ಬಿಜೆಪಿಗರು ಪ್ರತಿ ದಾಳಿಗೆ ನಿಂತಿದ್ದಾರೆ. ಆದರೆ ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಈವರೆಗೂ ಇ.ಡಿ ಅನುಮತಿ ಕೇಳಿಲ್ಲ. ಇದನ್ನೂ ಓದಿ: ಆರಗ ಜ್ಞಾನೇಂದ್ರ, ತಂಡದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹ ಅಧ್ಯಯನ

ಇದರ ಮಧ್ಯೆಯೇ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಸಂಬAಧ ಪ್ರಧಾನಿಗಳ ಜೊತೆ ಡಿಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Share This Article