ಬೆಂಗಳೂರು: ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸೋಮವಾರ ನಡೆದ ಮೈಸೂರು (Mysuru) ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಅವರಿಗೆ ಸತ್ಯದ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಬೆಂಗಳೂರಿನಿಂದ ಮೈಸೂರುವರೆಗೆ ಎನ್‌ಡಿಎ (NDA) ವತಿಯಿಂದ ಪಾದಯಾತ್ರೆ ಮಾಡುತ್ತೇವೆ ಎಂದು ವಿವರಿಸಿದರು. ಇದನ್ನೂ ಓದಿ: ಅಭಿಮನ್ಯುವಿಗೆ ಮಾಡಿದಂತೆ ಇಡೀ ಭಾರತಕ್ಕೆ ಚಕ್ರವ್ಯೂಹ ರಚಿಸಿದ್ದಾರೆ, ದೇಶವನ್ನ ಧ್ವಂಸಗೊಳಿಸುತ್ತಾರೆ – ರಾಗಾ ಆತಂಕ
ವಿವಿಧ ಹಗರಣಗಳ ಕುರಿತು ಸರ್ಕಾರವು ನಮಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ. ಸರ್ಕಾರಕ್ಕೆ ಸತ್ಯವನ್ನು ಎದುರಿಸುವ ಧಮ್ ಇದ್ದಿದ್ದರೆ ಅವರು ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ಕೊಡುತ್ತಿದ್ದರು. ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಸೇರಿ ಎಲ್ಲಾ ಅವ್ಯವಹಾರಗಳನ್ನು ಜನರಿಗೆ ತಿಳಿಸುತ್ತೇವೆ. ಭ್ರಷ್ಟಾಚಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧ – ಸಿದ್ದರಾಮಯ್ಯ