ಮೈಸೂರು: ಮುಡಾದಲ್ಲಿ (MUDA) 50:50 ಅನುಪಾತದ ಸೈಟು ಹಂಚಿಕೆಯಲ್ಲಿ ಹಗರಣ ಆಗಿದೆ. ಮೇಲ್ನೋಟಕ್ಕೆ ಹಗರಣದ ಆಗಿದೆ ಎಂದು ಎಲ್ಲರೂ ಮಾತನಾಡುತ್ತಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವರ್ಚಸ್ಸಿಗೆ ಧಕ್ಕೆ ತಂದು ಅಧಿಕಾರಕ್ಕೆ ಬರುವುದೇ ಬಿಜೆಪಿಯ ಮುಖ್ಯ ಗುರಿ. ಅದಕ್ಕಾಗಿ ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವವನ್ನು ಕೊಲ್ಲುವ ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಿ, ಅವರ ಹೆಸರಿಗೆ ಮಸಿ ಬಳಿಯುವ ಯತ್ನದಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಮತ್ತೆ ಹಾಟ್ ಅವತಾರ ತಾಳಿದ ‘ಟೋಬಿ’ ಬೆಡಗಿ ಚೈತ್ರಾ
ಸಿಎಂ ಪತ್ನಿಗೆ ಸೇರಿದ ಜಮೀನಿನ ಮೇಲೆ ಮತ್ತೊಂದು ಪ್ರಕರಣ ದಾಖಲು ವಿಚಾರವಾಗಿ ಮಾತನಾಡಿ, ಈ ಪ್ರಕರಣ ಕೋರ್ಟ್‌ನಲ್ಲಿ ತೀರ್ಮಾನ ಆಗುತ್ತದೆ. ದೂರುದಾರರು ಇಷ್ಟು ವರ್ಷಗಳು ಸುಮ್ಮನ್ನಿದ್ದು, ಈಗ ಪ್ರಕರಣ ದಾಖಲಿಸಿದ್ದಾರೆ. ತಹಶೀಲ್ದಾರ್ ಮುಂದೆ ಒಪ್ಪಿಗೆ ಸೂಚಿಸಿ ದೇವರಾಜ್‌ಗೆ ಬರೆದುಕೊಟ್ಟಿದ್ದಾರೆ. ದೇವರಾಜ್ ತಪ್ಪು ಮಾಡಿದ್ದರೆ ಇದು ನಮ್ಮ ತಪ್ಪಲ್ಲ. ಕೋರ್ಟ್‌ನಲ್ಲಿಯೇ ಎಲ್ಲವೂ ತೀರ್ಮಾನ ಆಗುತ್ತದೆ ಎಂದರು.
ಸಿಎಂ ರಾಜೀನಾಮೆಗೆ ವಿಪಕ್ಷಗಳ ಒತ್ತಾಯ ವಿಚಾರವಾಗಿ ರಾಜೀನಾಮೆ ಕೊಡಲು ಕಾರಣ ಇರಬೇಕು. ಸಿಎಂ ತಪ್ಪು ಮಾಡದೆ ಇದ್ದರೂ ತನಿಖಾ ಸಂಸ್ಥೆಯನ್ನ ಬಳಸಿಕೊಂಡು ರಾಜೀನಾಮೆಗೆ ಯತ್ನಿಸುತ್ತಿದ್ದಾರೆ. ಜನರು ಉಪಚುನಾವಣೆಯಲ್ಲಿ ನಮಗೆ ಬೆಂಬಲ ಸೂಚಿಸಿದ್ದಾರೆ. ನಮಗೆ ನೈತಿಕ ಸ್ಥೈರ್ಯ ಸಿಕ್ಕಿದೆ. ಹೀಗಾಗಿ ನಾವು ರಾಜೀನಾಮೆ ಕೊಡಲ್ಲ. ಮುಡಾದಲ್ಲಿ 50:50 ಅನುಪಾತದಲ್ಲಿ ಹಗರಣ ಆಗಿದೆ. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಮೇಲ್ನೋಟಕ್ಕೆ ಹಗರಣದ ಆಗಿದೆ ಎಂದು ಎಲ್ಲರೂ ಮಾತನಾಡುತ್ತಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ. ಇನ್ನೂ ನನ್ನ ತಂದೆ, ತಾಯಿ, ಮಾವನ ವಿರುದ್ಧ ಕಾನೂನುಬಾಹಿರವಾಗಿ ಬದಲಿ ಭೂಮಿ ಪಡೆದ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ. ಇದು ತನಿಖಾ ಸಂಸ್ಥೆಗೂ ಸಹ ಗೊತ್ತಿದೆ. ಇಡಿಯಿಂದ ಮುಡಾ ಕ್ಲೀನ್ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಮುಡಾವನ್ನು ಕ್ಲೀನ್ ಮಾಡಲು ಆಯೋಗ ರಚನೆ ಮಾಡಿದ್ದೇವೆ. ಮುಡಾವನ್ನು ಖಂಡಿತ ನಾವೇ ಕ್ಲೀನ್ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ (Mysuru) ಮುಡಾ ವಿಚಾರಕ್ಕೆ ಮುಡಾ ಸಮಾವೇಶ ಮಾಡಲಾಗಿದೆ. ಹೀಗಾಗಿ ಹಾಸನದಲ್ಲಿ ಜನಾಂದೋಲನ ಸಮಾವೇಶ ಮಾಡುತ್ತಿದ್ದೇವೆ ಅಷ್ಟೇ. ಇಡಿ ತನಿಖೆಯಲ್ಲಿ ತಂದೆಯ ಆರೋಪದ ಮೇಲೆ ವಿಚಾರಣೆ ನಡೆಯುತ್ತಿಲ್ಲ. ಇಡಿಗೆ ವಿಚಾರಣೆ ಮಾಡುವ ಹಕ್ಕು ಇಲ್ಲ. ಇದರಲ್ಲಿ ಸತ್ಯ ಏನು ಇಲ್ಲ ಅಂಥ ಎಲ್ಲರಿಗೂ ಗೊತ್ತಿದೆ. ಆರ್‌ಟಿಐ ಕಾರ್ಯಕರ್ತ ಮಾಡಿರುವ ಆರೋಪದಲ್ಲಿ ಸತ್ಯ ಇಲ್ಲ. ಪ್ರತಿಪಕ್ಷಗಳು ನಮ್ಮ ನಿರುತ್ಸಾಹಗೊಳಿಸಲು ಯತ್ನಿಸುತ್ತಿದ್ದಾರೆ. ಅಧಿಕಾರದ ಹಪಹಪಿಯಿಂದ ಏನು ಬೇಕಾದರೂ ಮಾಡುತ್ತಾರೆ. ನಮಗೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಪ್ರತ್ಯೇಕ ಆಯೋಗದ ಮೂಲಕ ಮುಡಾ ತನಿಖೆ ಮಾಡಿಸುತ್ತಿದ್ದೇವೆ ಎಂದು ತಿಳಿಸಿದರು.
ಸಿದ್ದರಾಮಯ್ಯ (CM Siddaramaiah) ಸ್ವಾಭಿಮಾನಿ ಸಮಾವೇಶ ವಿಚಾರವಾಗಿ, ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದಕ್ಕೆ ಸಮಾವೇಶ ಮಾಡಲಾಗುತ್ತಿದೆ. ಮೈಸೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದು, 2 ಲಕ್ಷಕ್ಕೂ ಹೆಚ್ಚು ಜನರ ಸೇರುತ್ತಾರೆ. ಸಮಾವೇಶ ಮೂಲಕ ವಿಪಕ್ಷಗಳ ಆರೋಪಕ್ಕೆ ಉತ್ತರ ಕೊಡಲಿದ್ದಾರೆ. ಈಗಾಗಲೇ ಉಪಚುನಾವಣೆ ಫಲಿತಾಂಶದಿಂದ ಉತ್ತರ ಸಿಕ್ಕಿದೆ. ಸಮಾವೇಶಕ್ಕೆ ಪಕ್ಷಕ್ಕೆ ಸಂಪೂರ್ಣ ಒಪ್ಪಿಗೆ ಇದೆ. ಹೈಕಮಾಂಡ್‌ಗೆ ಡಿಕೆಶಿ ಬೆಂಬಲಿಗರು ಯಾವುದೇ ಪತ್ರ ಬರೆದಿಲ್ಲ, ಇದು ನನಗೆ ಗೊತ್ತಿಲ್ಲ. ಅದು ನಕಲಿ ಪತ್ರವಾಗಿರಬೇಕು. ಸಿದ್ದರಾಮಯ್ಯ ಸುದೀರ್ಘ ರಾಜಕಾರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ ಎನ್ನುವುದನ್ನು ತಿಳಿಸುತ್ತದೆ ಎಂದರು.ಇದನ್ನೂ ಓದಿ: 19ರ ಯುವತಿ ಮೇಲೆ ಅತ್ಯಾಚಾರ, ಕೊಲೆ – ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಿದ್ದ ಸರಣಿ ಹಂತಕ ಅರೆಸ್ಟ್