ತುಮಕೂರು: ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಮನವೊಲಿಕೆ ವಿಫಲವಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹಾಲಿ ಸಂಸದ ಮುದ್ದಹನುಮೇಗೌಡ ಅವರನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದ್ರೆ ಇದೀಗ ಹಾಲಿ ಸಂಸದರು ಕಾಂಗ್ರೆಸ್ ಆಫರ್ ತಿರಸ್ಕರಿಸಿ ನಾಮಪತ್ರ ಸಲ್ಲಿಸಿದ್ದಾರೆ.
ಪರಮೇಶ್ವರ್ ಬಳಿಕ ದಿನೇಶ್ ಗುಂಡೂರಾವ್ ಅವರು ಹೊಸ ಆಫರ್ ನೀಡುವ ಮೂಲಕ ಮುದ್ದಹನುಮೇಗೌಡ ಮನವೊಲಿಕೆಗೆ ಪ್ರಯತ್ನಿಸಲಾಗಿತ್ತು. ಆದ್ರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಮುದ್ದಹನುಮೇಗೌಡರು, ತುಮಕೂರಿನಿಂದಲೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆ ಕೆ.ಎಂ ರಾಜಣ್ಣ ಕೂಡ ನಾಮಪತ್ರ ಸಲ್ಲಿಸಿದ್ದಾರೆ.
Advertisement
Advertisement
ಆಫರ್ ಏನು..?
ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್, ಹಾಲಿ ಸಂಸದರಿಗೆ ಆಫರ್ ನೀಡಿತ್ತು. ಅಲ್ಲಿ ನಮ್ಮವರೇ ಕಾಂಗ್ರೆಸ್ ಶಾಸಕರಿದ್ದಾರೆ. ನಿಮ್ಮನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ದಿನೇಶ್ ಗುಂಡೂರಾವ್ ಆಫರ್ ನೀಡಿದ್ದರು.
Advertisement
ಸದ್ಯ ಬೆಂಗಳೂರು ಉತ್ತರದಿಂದ ಸ್ಪರ್ಧಿಸಲು ಮುದ್ದಹನುಮೇಗೌಡ ನಿರಾಕರಿಸಿದ್ದು, ಹೀಗಾಗಿ ಬಿ. ಎಲ್ ಶಂಕರ್ ಅಭ್ಯರ್ಥಿಯಾಗುವುದು ಖಚಿತವಾಗಿದೆ. ಹೀಗಾಗಿ ಬೆಂಗಳೂರು ಉತ್ತರದಿಂದ ಬಿ.ಎಲ್ ಶಂಕರ್ ವರ್ಸಸ್ ಸದಾನಂದ ಗೌಡ ಸ್ಪರ್ಧೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ನಾಳೆ(ಮಂಗಳವಾರ) ಕೊನೆಯ ದಿನವಾಗಿದೆ.