ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಹಾಮಳೆಯಿಂದ ಉಂಟಾಗಿರುವ ಅತಿವೃಷ್ಟಿ ಪರಿಶೀಲನೆ ನಡೆಸಲು ಕ್ಷೇತ್ರಕ್ಕೆ ಬಂದು ಗ್ರಾಮವಾಸ್ತವ್ಯ ನಡೆಸುವಂತೆ ಸಿಎಂ ಕುಮಾರಸ್ವಾಮಿ ಅವರಿಗೆ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ವೀಡಿಯೋ ಪೋಸ್ಟ್ ಮಾಡಿರುವ ಶಾಸಕರು, ಕೊಡಗು ಪ್ರವಾಹ ಸಂತ್ರಸ್ತರಿಗೆ ನೆರವು ನೀಡಲು ಸಿಎಂ ಆಗಿ ನೀವು ಶಕ್ತಿ ಮೀರಿ ಕೆಲಸ ಮಾಡಿದ್ದೀರಿ. ನಿಮಗೇ ಧನ್ಯವಾದ. ಆದರೆ ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಗೆ ಅಪಾರ ನಷ್ಟವಾಗಿದೆ. ಅಲ್ಲದೇ ರೈತರು ಬೆಳೆದಿರುವ ಬೆಳೆ ನಾಶವಾಗಿದ್ದು, ಹಲವು ಸೇತುವೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ಅದ್ದರಿಂದ ನೀವು ಇಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಕೈಮುಗಿದು ಮನವಿ ಮಾಡಿದ್ದಾರೆ.
Advertisement
Advertisement
ಇದೇ ವೇಳೆ ಈ ಹಿಂದೆ ಮೂಡಿಗೆರೆಯಲ್ಲಿ ಗ್ರಾಮ ವಾಸ್ತವ್ಯ ಮಾಡುವ ಕಾರ್ಯಕ್ರಮ ನಿಗದಿಯಾಗಿದ್ದನ್ನು ನೆನಪಿಸಿರುವ ಅವರು, ಹಲವು ಕಾರಣಗಳಿಂದ ಅಂದು ಕಾರ್ಯಕ್ರಮ ಸಾಧ್ಯವಾಗಿಲ್ಲ. ಆದರೆ ಈ ಬಾರಿ ಗ್ರಾಮವಾಸ್ತವ್ಯ ಮಾಡಲು ಅವಕಾಶವಿದೆ. ಅದ್ದರಿಂದ ಶೀಘ್ರವೇ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಮನವಿ ಮಾಡಿದ್ದಾರೆ. ಇದನ್ನು ಓದಿ: ಭೂಕುಸಿತದಿಂದ ಕಂಗೆಟ್ಟ ಚಿಕ್ಕಮಗ್ಳೂರಿನ ಜನ- ಭವಿಷ್ಯದ ಆತಂಕದಲ್ಲಿ ಮಲೆನಾಡಿನ ಮಂದಿ
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Advertisement
https://www.facebook.com/mp.kumaraswamy/videos/317705765642706/