ಧಾರವಾಡ: ಹೊಲಿಗೆಯನ್ನೇ ಸ್ವ-ಉದ್ಯೋಗ ಮಾಡಿಕೊಳ್ಳಲು ಬಯಸುವ ಮಹಿಳೆಯರಿಗೆ ಮುದ್ರಾ ಯೋಜನೆಯಡಿ ಸಾಲ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
Advertisement
ಧಾರವಾಡದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಉಚಿತ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರಿಗೆ ಅನುಕೂಲವಾಗುವಂತೆ ಉಚಿತ ವೃತ್ತಿಪರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗ್ರಾಮ ವಿಕಾಸ ಸೊಸೈಟಿ ಅSಖ ಅನುದಾನದಡಿಯಲ್ಲಿ ಹಮ್ಮಿಕೊಂಡಿತ್ತು. ಇದೇ ವೇಳೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿತರಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್
Advertisement
Advertisement
ಈ ವೇಳೆ ಮಾತಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮಹಿಳೆಯರು ಬದುಕು ಕಟ್ಟಿಕೊಳ್ಳಲು ಧಾರವಾಡ ಜಿಲ್ಲೆಯಲ್ಲಿ ಉಚಿತ ಕೌಶಲ್ಯ ಅಭಿವೃದ್ಧಿ ಕಾರ್ಮಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಮೋದಿಯವರ ಆಶಯದಂತೆ ಗ್ರಾಮೀಣ ವಿಕಾಸಕ್ಕಾಗಿ ಹಲವು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನ ನಡೆಸಲಾಗ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 4 ಕೌಶಲ್ಯಾಭಿವೃದ್ದಿ ತರಬೇತಿ ಕೇಂದ್ರಗಳನ್ನ ಪ್ರಾರಂಭಿಸಲಾಗಿದ್ದು, 1200 ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
Advertisement
ಈ ತರಬೇತಿ ಪಡೆದ ಮಹಿಳೆಯರು, ಸ್ವ ಉದ್ಯೋಗ ಕೈಗೊಳ್ಳಲು ಮುಂದಾದರೆ, ಅವರೆಲ್ಲರಿಗೂ ಮುದ್ರಾ ಯೋಜನೆಯಡಿ ಸಾಲ ನೀಡಲು ಸಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ತರಬೇತಿ ಕೇಂದ್ರಗಳಲ್ಲಿರುವ ವ್ಯವಸ್ಥೆಗಳನ್ನ ಜೋಶಿ ಪರಿಶೀಲಿಸಿದರು.