ಕನ್ನಡದ ಹೆಸರಾಂತ ನಿರ್ದೇಶಕ ಶಶಾಂಕ್ (Shashank) ಇದೀಗ ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ವಿಜಯ ದಶಮಿಯ ದಿನದಂದು ಸದ್ದಿಲ್ಲದೇ ಈ ಚಿತ್ರಕ್ಕೆ ಮುಹೂರ್ತ ಕೂಡ ಮಾಡಿದ್ದಾರೆ. ಶಶಾಂಕ್ ಸಿನಿಮಾಸ್ ಮತ್ತು ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ಈ ಸಿನಿಮಾ (New Movie) ಮೂಡಿ ಬರಲಿದ್ದು, ಡಾರ್ಲಿಂಗ್ ಕೃಷ್ಣ ಚಿತ್ರದ ನಾಯಕ.
ಮೊನ್ನೆಯಷ್ಟೇ ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ ರಿಲೀಸ್ ಆಗಿದೆ. ಜನರು ಕೂಡ ಈ ಸಿನಿಮಾವನ್ನು ಇಷ್ಟಪಟ್ಟರು. ಈ ಚಿತ್ರದ ನಂತರ ಡಾರ್ಲಿಂಗ್ ಕೃಷ್ಣ (Darling Krishna) ಅವರಿಗಾಗಿ ಹೊಸ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಶಶಾಂಕ್. ನನ್ನ ನಿರ್ದೇಶನದ ಹೊಸ ಚಿತ್ರದ ಮುಹೂರ್ತ ವಿಜಯ ದಶಮಿಯ ಈ ಶುಭ ದಿನದಂದು ನೆರವೇರಿತು. ಹೊಸ ಪ್ರಯತ್ನಕ್ಕೆ ನಿಮ್ಮ ಹಾರೈಕೆಗಳು ಇರಲಿ ಎಂದಿದ್ದಾರೆ. ಇದನ್ನೂ ಓದಿ: ಕಾಂತಾರ ಕಾಳಗ: ಜಾಲತಾಣಗಳಲ್ಲಿ ಸೈದ್ಧಾಂತಿಕ, ರಾಜಕೀಯ, ಪ್ರಾದೇಶಿಕ ಸೊಗಡಿನ ಚರ್ಚೆ
ಲವ್ ಸ್ಟೋರಿ, ಸಾಹಸ ಪ್ರಧಾನ ಸಿನಿಮಾಗಳ ಮೂಲಕ ಅನೇಕ ಹಿಟ್ ಚಿತ್ರಗಳನ್ನು ಕೊಟ್ಟಿರುವ ಶಶಾಂಕ್, ಹೊಸ ಸಿನಿಮಾದ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ವಿಷಯಗಳನ್ನು ಹಂಚಿಕೊಳ್ಳಲಿದ್ದು, ಅತೀ ಶೀಘ್ರದಲ್ಲೇ ಸಿನಿಮಾದ ಟೈಟಲ್ ಕೂಡ ಅನಾವರಣ ಮಾಡುತ್ತಾರಂತೆ. ಇದೇ ಮೊದಲ ಬಾರಿಗೆ ಶಶಾಂಕ್ ಮತ್ತು ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ನಲ್ಲಿ ಸಿನಿಮಾ ಮೂಡಿ ಬರುತ್ತಿರುವುದರಿಂದ ಸಹಜವಾಗಿಯೇ ಕುತೂಹಲ ಮೂಡಿಸಿದೆ.